Mysore
21
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಪಟಾಕಿ ಸಿಡಿತದಿಂದ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಕೆ.ಆರ್.‌ಆಸ್ಪತ್ರೆಯಲ್ಲಿ ಸಿದ್ಧತೆ

ಮೈಸೂರು: ಪಟಾಕಿ ಸಿಡಿತದಿಂದ ಗಾಯಗೊಳ್ಳುವವರಿಗೆ ಚಿಕಿತ್ಸೆ ನೀಡಲು ಮೈಸೂರಿನ ಕೆ.ಆರ್‌.ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಈ ಕುರಿತು ವೈದ್ಯರಾದ ಅಮಿತ್‌ ಹಾಗೂ ಸುರಭಿ ಅವರು ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದಂದು ಪಟಾಕಿ ಸಿಡಿತಗಳಿಂದ ಕಣ್ಣಿಗೆ ಹಾನಿಯಾಗಿ ಬರುವವರಿಗೆ ತುರ್ತು ಚಿಕಿತ್ಸೆ ಒದಗಿಸಲಾಗುತ್ತದೆ. ಕೆ.ಆರ್.ಆಸ್ಪತ್ರೆಯ ಕಣ್ಣಿನ ವಿಭಾಗದಲ್ಲಿ ದಿನದ 24 ಗಂಟೆಯೂ ಚಿಕಿತ್ಸೆ ಲಭ್ಯವಿರಲಿದೆ. ಕಣ್ಣಿನ ಹಾನಿಗೆ ಒಳಗಾದವರ ಚಿಕಿತ್ಸೆಗಾಗಿ ಪ್ರತ್ಯೇಕ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಮಕ್ಕಳು ಪಟಾಕಿ ಸಿಡಿಸುವಾಗ ಎಚ್ಚರಿಕೆ ವಹಿಸಬೇಕು. ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿಯಾದರೆ ಕೂಡಲೇ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಬೇಕು. ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದರೆ ದೃಷ್ಟಿ ಕಳೆದುಕೊಳ್ಳುವುದನ್ನು ತಡೆಯಬಹುದು ಎಂದು ಜನತೆಗೆ ಸಲಹೆ ನೀಡಿದರು.

Tags:
error: Content is protected !!