ಚಾಮರಾಜನಗರ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಬಳಿ ಸಾರಿಗೆ ಬಸ್‌ಗಳ ನಡುವಿನ ಸರಣಿ ಅಪಘಾತದಲ್ಲಿ ಗಾಯಗೊಂಡಿರುವ ಜಿಲ್ಲೆಯ ಗಾಯಾಳುಗಳ ಆರೋಗ್ಯವನ್ನು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ವಿಚಾರಿಸಿದರು.
ಜಿಲ್ಲಾಧಿಕಾರಿ ಶಿಲ್ಪಾನಾಗ್, ಕೊಳ್ಳೇಗಾಲ ತಹಸಿಲ್ದಾರ್ ಬಸವರಾಜು ಅವರು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ಭಾನುವಾರ ಸಂಜೆ ಸಂಭವಿಸಿದ ಮೂರು ಬಸ್‌ಗಳ ನಡುವಿನ ಸರಣಿ ಅಪಘಾತದಲ್ಲಿ ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಕೂಡ ಸೇರಿದೆ.
ಈ ಅಪಘಾತದಲ್ಲಿ ಗಾಯಗೊಂಡವರಲ್ಲಿ ಜಿಲ್ಲೆಯವರಿದ್ದಾರೆ. ಹಾಗಾಗಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಎಲ್ಲರ ಆರೋಗ್ಯ ವಿಚಾರಿಸಿದ್ದಾರೆ.





