ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಂಭವವಿದೆ.
ಇಂದಿನಿಂದ ಅಕ್ಟೋಬರ್.27ರವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಭಾರೀ ಮಳೆಯಾಗುವ ಸಂಭವ ಇರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





