Mysore
27
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಸೆಂಟರ್‌ ಮೇಲೆ ದಾಳಿ: ಡಾ.ಪಿ.ಸಿ.ಕುಮಾರಸ್ವಾಮಿ ಹೇಳಿದ್ದಿಷ್ಟು.!

ಮೈಸೂರು: ಭ್ರೂಣಲಿಂಗ ಪತ್ತೆ ಸೆಂಟರ್‌ ಮೇಲೆ ಯಶಸ್ವಿ ದಾಳಿ ನಡೆಸಲಾಗಿದ್ದು, ಐವರನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇದು ರಾಜ್ಯ ಕಚೇರಿ ಹಾಗೂ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿಯಾಗಿ ನಡೆಸಿದ ಹಠಾತ್‌ ಕಾರ್ಯಾಚರಣೆಯಾಗಿದೆ.

ಇದನ್ನು ಓದಿ : ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಬೆಳಕಿಗೆ: ಸಚಿವ ದಿನೇಶ್‌ ಗುಂಡೂರಾವ್‌ ರಿಯಾಕ್ಷನ್‌

ಅಲ್ಲಿಗೆ ಸ್ಕ್ಯಾನಿಂಗ್‌ ಮಾಡಿಸಲು ಹೋಗುತ್ತಿದ್ದ ಗರ್ಭಿಣಿಯರ ಮೇಲೆ ನಿಗಾ ಇಡಲಾಗಿತ್ತು, ಅವರನ್ನು ಮಾನಿಟರ್‌ ಮಾಡುವ ಮೂಲಕ ಈ ಕಾರ್ಯಾಚರಣೆ ನಡೆಸಲಾಗಿದೆ.

ಕಾರ್ಯಾಚರಣೆಯಲ್ಲಿ ಒಟ್ಟು 5 ಜನರನ್ನು ಬಂಧಿಸಲಾಗಿದೆ. ದಾಳಿಯ ವೇಳೆ ಇಬ್ಬರು ಗರ್ಭಿಣಿಯರು ಅಲ್ಲಿದ್ದರು. ಅವರ ಪೋಷಕರ ವಿರುದ್ಧವೂ ಪ್ರಕರಣ ದಾಖಲು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಎಷ್ಟು ದಿನಗಳಿಂದ ಭ್ರೂಣ ಲಿಂಗ ಪತ್ತೆ ನಡೆಯುತ್ತಿತ್ತು. ಇಲ್ಲಿಯವರೆಗೆ ಎಷ್ಟು ಭ್ರೂಣ ಹತ್ಯೆ ನಡೆದಿವೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

Tags:
error: Content is protected !!