ಬಿಹಾರ: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನ್ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಯಿತು.
ವಿಕಾಸಶೀಲ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ್ ಸಹಾನಿ ಅವರನ್ನು ಡಿಸಿಎಂ ಅಭ್ಯರ್ಥಿಯಾಗಿ ಘೋಷಿಸಲಾಯಿತು.
ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಅವರು, ಎಲ್ಲಾ ಹಿರಿಯ ನಾಗರಿಕರೊಂದಿಗೆ ಚರ್ಚಿಸಿದ ನಂತರ, ಮುಂಬರುವ ಬಿಹಾರ ಚುನಾವಣೆಯಲ್ಲಿ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂದನ್ ಸಿಎಂ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಇನ್ನು ನವೆಂಬರ್.6 ಮತ್ತು 11ರಂದು ಬಿಹಾರ ಚುನಾವಣೆ ನಡೆಯಲಿದ್ದು, ನವೆಂಬರ್.14ರಂದು ಫಲಿತಾಂಶ ಹೊರಬೀಳಲಿದೆ.





