Mysore
26
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಕರ್ನೂಲ್‌ ಬಸ್‌ ದುರಂತ | ಮುರ್ಮು, ಮೋದಿ ಸಂತಾಪ ; ಮೃತ ಕುಟುಂಬಕ್ಕೆ 2 ಲಕ್ಷ ಪರಿಹಾರ

ಹೊಸದಿಲ್ಲಿ : ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 20 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ಬಸ್ ಅಗ್ನಿ ಅಪಘಾತದಲ್ಲಿ ಜೀವಹಾನಿ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಇದನ್ನು ಓದಿ: ಬೈಕ್‌ಗೆ ಬಸ್‌ ಡಿಕ್ಕ : ಗಾಢ ನಿದ್ರೆಯಲ್ಲಿದ್ದ 20 ಮಂದಿ ಪ್ರಯಾಣಿಕರು ಸುಟ್ಟು ಭಸ್ಮ…..

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

ಇದೇ ವೇಳೆ ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Tags:
error: Content is protected !!