Mysore
27
clear sky

Social Media

ಗುರುವಾರ, 22 ಜನವರಿ 2026
Light
Dark

ಕೆರೆಗಳ ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ

ಮಂಡ್ಯ : ಕೆರೆಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಕೆರೆಗಳನ್ನು ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ವ್ಯಾಪ್ತಿಯ ಕರೆಗಳ ಒತ್ತುವರಿ ತೆರವುಗೊಳಿಸುವ ಕುರಿತು ಶುಕ್ರವಾರ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ೯೬೨ ಕೆರೆಗಳಿವೆ, ಕಂದಾಯ ಇಲಾಖೆಯ ವತಿಯಿಂದ ಎಲ್ಲ ಕೆರೆಗಳನ್ನು ಸರ್ವೇ ನಡೆಸಿ ಸಂಬಂಧಪಟ್ಟ ಇಲಾಖೆಯ ವಶಕ್ಕೆ ಈಗಾಗಲೇ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮುಖ್ಯಮಂತ್ರಿಗಳು ಪ್ರತಿ ಮಾಹೆಯಲ್ಲಿ ಕೆರೆ ಅಭಿವೃದ್ಧಿ ಪ್ರಾಽಕಾರದ ಸಭೆಯನ್ನು ವಿಡಿಯೋ ಕಾನ್ಛರೆನ್ಸ್ ಮೂಲಕ ನಡೆಸಿ ಆಯಾ ಜಿಲ್ಲೆಯ ಕೆರೆಗಳ ಸರ್ವೇ ಮಾಡಬೇಕು, ಕೆರೆಗಳು ಒತ್ತುವರಿಗೊಂಡಿದ್ದರೆ ತೆರವುಗೊಳಿಸಬೇಕು, ನಂತರ ಕೆರೆಗಳು ಒತ್ತುವರಿಯಾಗದಂತೆ ಸಂರಕ್ಷಣೆ ಮಾಡಲು ರಾಜ್ಯದ ಎಲ್ಲ ಜಿಲ್ಲಾಽಕಾರಿ ಮತ್ತು ಸಿಇಒಗಳಿಗೆ ಸೂಚಿಸಿದ್ದಾರೆ ಎಂದರು.

೨೦೨ ಕೆರೆಗಳು ಒತ್ತುವರಿ: ಮಂಡ್ಯ ಜಿಲ್ಲೆಯಲ್ಲಿ ಒಟ್ಟು ೯೬೨ ಕೆರೆಗಳು ಇದ್ದು, ಅದರಲ್ಲಿ ೨೦೨ ಕೆರೆಗಳನ್ನು ಒತ್ತುವರಿ ಮಾಡಿರುವುದು ಬೆಳಕಿಗೆ ಬಂದಿದೆ. ಒತ್ತುವರಿಗೊಂಡಿರುವ ಕೆರೆಗಳನ್ನು ತೆರವುಗೊಳಿಸುವುದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಎಚ್ಚರಿಸಿದರು. ಅಧಿಕಾರಿಗಳ ಹೆಚ್ಚಿನ ಮುತುವರ್ಜಿ ಮತ್ತು ಜವಾಬ್ದಾರಿಯನ್ನು ತೆಗೆದುಕೊಂಡು ಕೆರೆ ಒತ್ತುವರಿಯನ್ನು ತೆರವುಗೊಳಿಸಬೇಕು, ತೆರವುಗೊಳಿಸಿದ ಕೆರೆಗಳು ಮತ್ತೆ ಒತ್ತುವರಿ ಮಾಡದಂತೆ ಸಂರಕ್ಷಣೆ ಮಾಡಬೇಕು, ಕೆರೆ ಒತ್ತುವರಿ ಮಾಡಿದವರು ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದ ಹೇಳಿದರು.

ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್: ಕಾಯ್ದೆ ೧೯೨ಬಿ ಅನ್ವಯ ಕೆರೆ ಸಂರಕ್ಷಣೆ ಮಾಡಲು ಅಽಕಾರಿಗಳು ನಿರ್ಲಕ್ಷ್ಯ, ಅಸಡ್ಡೆ ಅಥವಾ ವಿಫಲವಾದರೆ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದಾಗಿದೆ ಎಂದು ಅಧಿಕಾರಿಗಳನ್ನು ಎಚ್ಚರಿಸಿದರು. ಒತ್ತುವರಿಯಾಗಿರುವ ಕೆರೆಗಳನ್ನು ಸಂರಕ್ಷಣೆ ಮಾಡಲು ಪ್ರತಿ ಮಾಹೆಗೆ ಶೇ.೫೦ ರಷ್ಟು ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಗುರಿಯನ್ನು ನೀಡಬೇಕು.

ತಹಸಿಲ್ದಾರ್ ಬಳಿ ಇರುವ ಅನುದಾನವನ್ನು ಬಳಸಿಕೊಂಡು ಶ್ರೀಘ್ರವಾಗಿ ಒತ್ತುವರಿಯನ್ನು ತೆರವುಗೊಳಿಸಬೇಕು, ತಹಸಿಲ್ದಾರ್ ಇದರ ಉಸ್ತುವಾರಿ ವಹಿಸಿಕೊಂಡು ಕೆರೆ ಸಂರಕ್ಷಣೆ ಮಾಡಲು ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಾಯ್ದೆ ೧೯೨ಬಿ ಅನ್ವಯ ಕಠಿಣ ಕ್ರಮ ಕೈಗೊಳ್ಳಿ ಎಂದರು. ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ನರಸಿಂಹಮೂರ್ತಿ, ಮಂಡ್ಯ ತಹಸಿಲ್ದಾರ್ ವಿಶ್ವನಾಥ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಭಾಗವಹಿಸಿದ್ದರು.

Tags:
error: Content is protected !!