ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೊಂತಾ ಚಂಡಮಾರುತದ ಅಬ್ಬರ ಜೋರಾಗಿದೆ.
ಭಾರೀ ಗಾಳಿಯೊಂದಿಗೆ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಧಾವಿಸಿ ಬರುತ್ತಿದ್ದು, ಆಂಧ್ರಪ್ರದೇಶ ಹಾಗೂ ಕರ್ನಾಟಕ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ: ರಾಜ್ಯದಲ್ಲಿ ಎರಡು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ
ರಾಜ್ಯದಲ್ಲಿ ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿರುಗಾಳಿಯೂ ಹೆಚ್ಚಾಗಲಿದೆ ಎಂದು ಹೇಳಿದೆ.
ಆಂಧ್ರಪ್ರದೇಶದ ಕಾಕಿನಾಡಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಐದು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಂಡಮಾರುತದ ಪರಿಣಾಮ ಆಂಧ್ರಪ್ರದೇಶ, ಕರ್ನಾಟಕ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.





