Mysore
18
few clouds

Social Media

ಬುಧವಾರ, 21 ಜನವರಿ 2026
Light
Dark

ಮೈಸೂರು | ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ

Law student gang-raped Three arrested

ಮೈಸೂರು : ನಗರದ ಇಟ್ಟಿಗೆಗೂಡಿನ ಬಳಿ ಅಲೆಮಾರಿ ಕುಟುಂಬದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಕಾರ್ತಿಕ್‌ನನ್ನು ಪೊಲಿಸರು ಜೈಲಿಗಟ್ಟಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿದ್ದ ಗಾಯಾಳುವಿಗೆ ಚಿಕಿತ್ಸೆ ನಿಡುತ್ತಿರುವ ವೈದ್ಯರು ಆತನ ಆರೋಗ್ಯ ಸ್ಥಿರವಾಗಿದೆ ಎಂದು ವರದಿ ನೀಡಿದ್ದರು. ವರದಿಯ ಆಧಾರದಲ್ಲಿ ಪೊಲೀಸರು ಆತನನ್ನು ಮೂರು ದಿನಗಳ ಕಾಲ ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ:-ಮೈಸೂರು | ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ

ಈ ವೇಳೆ ಆತ ಇನ್ನಾವುದಾದರೂ ಅಪರಾಧ ಪ್ರಕರಣಗಳಲ್ಲಿ ಬಾಗಿಯಾಗಿದ್ದಾನೆಯೇ ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸಿದ್ದರು. ನಂತರ ಆತನನ್ನು ದೀಪಾವಳಿ ಹಬ್ಬದ ದಿನದಂದೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧಿಶರು ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಗುಂಡೇಟಿನಿಂದ ಆತನ ಬಲಗಾಲಿನಲ್ಲಿ ಗಾಯವಾಗಿದ್ದು, ಯಾವುದೇ ಶಸ್ತ್ರ ಚಿಕಿತ್ಸೆಯ ಅವಶ್ಯಕತೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಆತನಿಗೆ ಜೈಲಿನಲ್ಲಿಯೇ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ.

Tags:
error: Content is protected !!