ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ವಿಷಯ ಚರ್ಚೆಯಾಗುತ್ತಲೇ ಇದೆ. ಸದ್ಯ ಇದೀಗ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಡೆ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂಬರುವ 2028ರ ಚುನಾವಣೆಯಲ್ಲೂ ಸ್ಪರ್ಧೆ ಮಾಡುವುದಾಗಿ ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಚರ್ಚೆಯನ್ನು ಹುಟ್ಟು ಹಾಕಿದ್ದಾರೆ.
ಬೆಂಗಳೂರಿನ ಖಾಸಗಿ ವಾಹಿನಿಯೊಂದು ಸಿಎಂ ಸಿದ್ದರಾಮಯ್ಯ ಅವರನ್ನು ಸಂದರ್ಶನ ನಡೆಸಿದ ವೇಳೆ, ತಮ್ಮ ರಾಜಕೀಯ ಜೀವನದ ಬಗ್ಗೆ ಮಾಹಿತಿ ನೀಡುತ್ತಾ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, 2028ರ ವಿಧಾನಸಭಾ ಚುನಾವಣೆಯಲ್ಲೂ ನಾನು ಸ್ಪರ್ಧೆ ಮಾಡಬೇಕು ಎಂದು ನನ್ನ ಸ್ನೇಹಿತರು, ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಧಿಕಾರ ಹಂಚಿಕೆ, ಸಿಎಂ ಬದಲಾವಣೆ ನಡುವೆ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಇದೀಗ ತಮ್ಮ ಸ್ಪರ್ಧೆ ಬಗ್ಗೆ ಹೇಳಿ ಕೊಂಡಿದ್ದು, ದೊಡ್ಡ ಮಟ್ಟದ ಚರ್ಚೆಗೆ ನಾಂದಿ ಹಾಡಿದಂತಾಗಿದೆ.
ಸಿದ್ದರಾಮಯ್ಯ ಹೇಳಿದ್ದು….
2028ರ ವಿಧಾನಸಭಾ ಚುನಾವಣೆಯಲ್ಲೂ ನಾನು ಸ್ಪರ್ಧೆ ಮಾಡಬೇಕು ಎಂದು ನನ್ನ ಸ್ನೇಹಿತರು, ಬೆಂಬಲಿಗರು ಹೇಳುತ್ತಿದ್ದಾರೆ. ಹಿಂದೆ ನಾನು 2028ರಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದೆ. ಆದರೆ ಈಗ ನನ್ನ ಸ್ನೇಹಿತರು ನೀವು ಸ್ಪರ್ಧಿಸಿದರೆ ಪಕ್ಷಕ್ಕೆ ದೊಡ್ಡ ಅನುಕೂಲ ಎಂದು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇದರ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದಿದ್ದಾರೆ. ಒಟ್ಟಾರೆಯಾಗಿ ಇದು ಚುನಾವಣಾ ರಾಜಕೀಯದಿಂದ ನಿವೃತ್ತಿ ಯೋಚನೆಯನ್ನು ಅಲ್ಲಗೆಳೆದಂತಿದೆ.





