Mysore
34
scattered clouds

Social Media

ಶನಿವಾರ, 02 ಮೇ 2026
Light
Dark

ಮೊಂತಾ ಚಂಡಮಾರುತ ಎಫೆಕ್ಟ್‌: ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೊಂತಾ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಅಕ್ಟೋಬರ್.29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವುದರಿಂದ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಗದಗ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಮೈಸೂರಿನಲ್ಲಿ ಇಂದು ಭಾರೀ ಮಳೆಯಾಗಲಿದೆ.

ಇದನ್ನು ಓದಿ: ಮೊಂತಾ ಚಂಡಮಾರುತ ಎಫೆಕ್ಟ್‌ :‌ ನಾಲ್ಕು ರಾಜ್ಯಗಳಿಗೆ ಭಾರೀ ಮಳೆಯ ಮುನ್ಸೂಚನೆ

ಬೀದರ್‌, ಕಲಬುರ್ಗಿ, ವಿಜಯಪುರ, ಯಾದಗಿರಿಯಲ್ಲಿ ನಾಳೆ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡ, ಯಾದಗಿರಿ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧೆಡೆ ಮಳೆಯಾಗಿದೆ. ಚಂಡಮಾರುತದಿಂದ ತಾಪಮಾನ ಕುಸಿತವಾಗಿ ಚಳಿಯ ಅನುಭವವಾಗುತ್ತಿದೆ.

ಇಂದು ಮಧ್ಯಾಹ್ನದ ವೇಳೆಗೆ ಚಂಡಮಾರುತ ಬಲಗೊಳ್ಳುವ ಸಾಧ್ಯತೆಯಿದ್ದು, ಆಂಧ್ರಪ್ರದೇಶ ಕರಾವಳಿ ದಾಟಲಿದೆ.

ಗಂಟೆಗೆ 100 ಕಿ.ಮೀ ವೇಗದವರೆಗೂ ಗಾಳಿ ಬೀಸಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

Tags:
error: Content is protected !!