Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ನಟ ಪುನೀತ್‌ ರಾಜ್‌ಕುಮಾರ್‌ 4ನೇ ವರ್ಷದ ಪುಣ್ಯಸ್ಮರಣೆ: ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ಬೆಂಗಳೂರು: ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಗಲಿ ಇಂದಿಗೆ ನಾಲ್ಕು ವರ್ಷಗಳು ಕಳೆದಿದೆ.

ನಟ ಪುನೀತ್‌ ರಾಜ್‌ ಕುಮಾರ್‌ ಅವರ 4ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ಅಪ್ಪು ಸಮಾಧಿಗೆ ಪತ್ನಿ ಅಶ್ವಿನಿ ಸೇರಿದಂತೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿ ಬಳಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ಇಂದು ಬೆಳಿಗ್ಗೆ ಪುನೀತ್‌ ರಾಜ್‌ ಕುಮಾರ್‌ ಪತ್ನಿ ಅಶ್ವಿನಿ ಮಗಳ ಜೊತೆ ಸೇರಿ ಪತಿಯ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ವೇಳೆ ರಾಘವೇಂದ್ರ ರಾಜ್‌ಕುಮಾರ್‌, ವಿನಯ್‌ ರಾಜ್‌ ಕುಮಾರ್‌ ಸೇರಿದಂತೆ ರಾಜ್‌ ಕುಟುಂಬಸ್ಥರು ಉಪಸ್ಥಿತರಿದ್ದರು.

ಇದನ್ನೂ ಓದಿ:-ಹುಣಸೂರು| ಜಮೀನಿಗೆ ಹೋದಾಗ ದುರಂತ: ವಿದ್ಯುತ್‌ ತಂತಿ ತುಳಿದು ತಾಯಿ, ಮಗ ಸಾವು

ಪುನೀತ್‌ ರಾಜ್‌ಕುಮಾರ್‌ಗೆ ಇಷ್ಟವಾಗಿದ್ದ ತಿಂಡಿ-ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾಗರೋಪಾದಿಯಲ್ಲಿ ಆಗಮಿಸುತ್ತಿರುವ ಅಪ್ಪು ಅಭಿಮಾನಿಗಳು ಅಪ್ಪು ಸಮಾಧಿ ಬಳಿ ಆಗಮಿಸಿ ಪುಷ್ಪ ನಮನ ಸಲ್ಲಿಸುತ್ತಿದ್ದಾರೆ.

ಇನ್ನು ಪುನೀತ್‌ ರಾಜ್‌ಕುಮಾರ್‌ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಇಂದು ಅನ್ನದಾನ ಮಾಡಲಾಗುತ್ತಿದ್ದು, ಹಲವೆಡೆ ರಕ್ತದಾನ ಶಿಬಿರಗಳು ಕೂಡ ನಡೆಯುತ್ತಿವೆ.

Tags:
error: Content is protected !!