ಮಂಡ್ಯ: ಜಿಲ್ಲೆಯ ಮದ್ದೂರಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ರಕ್ತದ ಕಲೆಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಯಲಾಗಿದೆ.
ಗ್ರಾಮದ ಸತೀಶ್ ಎಂಬುವವರ ಮನೆಯ ಎಲ್ಲಾ ಕಡೆ ರಕ್ತದ ಕಲೆಗಳು ಕಂಡುಬಂದಿದ್ದು, ಗ್ರಾಮಸ್ಥರಿಗೆ ಆತಂಕ ಹಾಗೂ ಅನುಮಾನ ಮೂಡಿತ್ತು.
ಮನೆಗೆ ದೌಡಾಯಿಸಿದ ಸೋಕೋ ಟೀಂ ಪರಿಶೀಲನೆ ನಡೆಸಿದ್ದು, ರಕ್ತದ ಕಲೆಗಳ ಬಗ್ಗೆ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ.
ಲ್ಯಾಬ್ ವರದಿ ಪ್ರಕಾರ ಮನೆಯಲ್ಲಿ ಬಿದ್ದಿರುವ ರಕ್ತದ ಕಲೆಗಳು ಮನುಷ್ಯನದ್ದು ಎಂದು ದೃಢವಾಗಿದೆ. ಪ್ರಕರಣ ಸಂಬಂಧ ಎಫ್‌ಎಸ್‌ಎಲ್ ವರದಿಗಾಗಿ ಕಾಯಲಾಗುತ್ತಿದೆ. ವರದಿ ಬಂದ ಬಳಿ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.





