ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.
ಬಳಿಕ ವೆಂಕಟೇಶ್ ಅವರು ಪೊಲೀಸರ ತುಕಡಿ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ನಂತರ ಪೊಲೀಸರು ಹಾಗೂ ವಿದ್ಯಾರ್ಥಿಗಳ ಪಥಸಂಚಲನ ನಡೆಯಿತು.
ಇದನ್ನು ಓದಿ; 70ನೇ ಕನ್ನಡ ರಾಜ್ಯೋತ್ಸವ: ಮೈಸೂರಿನ ಓವಲ್ ಮೈದಾನದಲ್ಲಿ ಧ್ವಜಾರೋಹಣ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ವೆಂಕಟೇಶ್ ಅವರು, ರಾಷ್ಟ್ರಕವಿ ಕುವೆಂಪು ಅವರ ನುಡಿಗಳಂತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂಬಂತೆ ಕನ್ನಡ ನಾಡಿನಲ್ಲ ಹುಟ್ಟಿರುವ ನಾವೆಲ್ಲರೂ ಎಲ್ಲೇ ನೆಲೆಸಿದರೂ ನಾಡು-ನುಡಿಯ ಘನತೆಯನ್ನು ಎತ್ತಿ ಹಿಡಿಯುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಸಿಇಓ ಮೋನಾರೋತ್, ಎಸ್ಪಿ ಡಾ.ಕವಿತಾ ಸೇರಿದಂತೆ ಹಲವರು ಭಾಗಿಯಾಗಿದ್ದರು.





