Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಇಬ್ಬರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ

ಚಿಕ್ಕಮಗಳೂರು: ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ದುಬಾರೆ, ಹಾರಂಗಿ ಆನೆ ಶಿಬಿರಗಳಿಂದ ಸಾಕಾನೆಗಳನ್ನು ಬಳಸಿಕೊಂಡು ಪುಂಡಾನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಏಕಲವ್ಯ ಆನೆಯ ನೇತೃತ್ವದಲ್ಲಿ ಪುಂಡಾನೆ ಸೆರೆಗೆ ಕಾರ್ಯಾಚರಣೆ ನಡೆಯಲಿದೆ.

ಅಕ್ಟೋಬರ್.‌31ರಂದು ಕಾಡಾನೆ ದಾಳಿಯಿಂದ ಸ್ಥಳದಲ್ಲೇ ಉಮೇಶ್‌ ಹಾಗೂ ಹರೀಶ್‌ ಎಂಬುವವರು ಮೃತಪಟ್ಟಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ಹೊರಹಾಕಿದ್ದರು.

ಈ ಹಿನ್ನೆಲೆಯಲ್ಲಿ ಪುಂಡಾನೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಖಡಕ್‌ ಆದೇಶ ಹೊರಡಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ.

Tags:
error: Content is protected !!