Mysore
23
haze

Social Media

ಶುಕ್ರವಾರ, 30 ಜನವರಿ 2026
Light
Dark

ಸಿ.ಟಿ.ರವಿಯನ್ನು ಲೂಟಿ ರವಿ ಅಂತಾನೇ ನಾವು ಕರಿಯೋದು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌

ಮೈಸೂರು: ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ನಾಯಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ.

ಸವಿತಾ ಸಮಾಜದ ವಿರುದ್ಧ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವಹೇಳನ ಹೇಳಿಕೆ ನೀಡಿರುವ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

ಇದನ್ನು ಓದಿ: ವಿದ್ಯುತ್‌ ಸ್ಪರ್ಶಿಸಿ ಕಾಡಾನೆಗಳ ಸಾವು ಪ್ರಕರಣ: ತನಿಖೆಗೆ ಆದೇಶಿಸಿದ ಈಶ್ವರ್‌ ಖಂಡ್ರೆ

ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಲಕ್ಷ್ಮಣ್‌ ಅವರು, ಸಿ.ಟಿ.ರವಿಯನ್ನು ಲೂಟಿ ರವಿ ಅಂತಾನೆ ನಾವು ಕರಿಯೋದು. ಸವಿತಾ ಸಮಾಜದ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಾರೆ. ಈ ಹಿಂದೆ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನ ಹೇಳಿಕೆ ನೀಡಿದ್ದರು. ಆದರೂ ಸಭಾಪತಿ ಹೊರಟ್ಟಿ ಅವರ ಮೇಲೆ ಕ್ರಮ ಕೈಗೊಳ್ಳಲಿಲ್ಲ.

ಈಗ ಆಡಿಯೋದಲ್ಲಿ ನಿಂದಿಸಿದ್ದು ದೃಢವಾಗಿದೆ. ಸಭಾಪತಿ ಹೊರಟ್ಟಿ ಬಿಜೆಪಿ ನಾಯಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಗರ ವಿಚಾರದಲ್ಲಿ ನ್ಯಾಯಾಲಯಗಳು ಕೆಲ ಸಂಸ್ಥೆಗಳು ಆಕ್ಟಿವ್ ಆಗಿ ಕೆಲಸ ಮಾಡುತ್ತಿವೆ. ಬಿಜೆಪಿಗರ ಮನಸ್ಥಿತಿ ಈ ರೀತಿ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈಗ ಸುಖಾ ಸುಮ್ಮನೆ ಮಾತನಾಡೋದನ್ನು ಕಡಿಮೆ ಮಾಡಿದ್ದಾರೆ.

ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮೈಸೂರು ಭಾಗದ ಮಾಜಿ ಸಂಸದ ಏನೇನೋ ಮಾತನಾಡ್ತಾರೆ. ಸಿ.ಟಿ.ರವಿ ವಿರುದ್ಧ ನಾನೇ ದೂರು ನೀಡಲು ಮುಂದಾಗುತ್ತಿದ್ದೇನೆ ಎಂದು ಹೇಳಿದರು.

Tags:
error: Content is protected !!