ಮಂಡ್ಯ: ಜಿಲ್ಲೆಯ ಯರಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರೊಂದು ಉರುಳಿಬಿದ್ದಿದ್ದು, ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ನಾಲೆಗೆ ಬಿದ್ದ ತಕ್ಷಣವೇ ಚಾಲಕ ಕೃಷ್ಣ ಎಂಬುವವರು ಸಮಯಪ್ರಜ್ಞೆ ಮೆರೆದು ಕಾರಿನಿಂದ ಹೊರಬಂದಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ನಾಲೆಗೆ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನು ಓದಿ: ಶಾಲಾ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಆರೋಪ: ನಾಲೆಗೆ ಹಾರಿ ಯುವಕ ಆತ್ಮಹತ್ಯೆ
ವಿಸಿ ನಾಲೆಯ ಅಕ್ಕಪಕ್ಕದಲ್ಲಿರುವ ರಸ್ತೆಗಳು ಅತ್ಯಂತ ಚಿಕ್ಕದಾಗಿದ್ದು, ತಡೆಗೋಡೆಗಳಿಲ್ಲದೇ ಅಪಾಯಕಾರಿ ಸ್ಥಿತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ವಿ.ಸಿ.ನಾಲೆಯಲ್ಲಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಇನ್ನೂ ಹೆಚ್ಚಿನ ಘಟನೆಗಳು ಆಗುವುದಕ್ಕಿಂತಲೂ ಮುಂಚೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.





