Mysore
16
few clouds

Social Media

ಶನಿವಾರ, 24 ಜನವರಿ 2026
Light
Dark

ಗ್ಯಾರಂಟಿಗೆ ಸಫಲಕ್ಕೆ ಅಧಿಕಾರಿ ಪಾತ್ರ ಹಿರಿದು : ಸಚಿವ ಚಲುವರಾಯಸ್ವಾಮಿ

ಮಂಡ್ಯ : ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆಯನ್ನು ರಾಜ್ಯ ಸರ್ಕಾರವು ಬಡವರ ಜೀವನ ಸುಧಾರಣೆಗಾಗಿ ಜಾರಿಗೆ ತಂದಿದ್ದು ಇದು ರಾಹುಲ್ ಗಾಂಧಿಯವರ ಕನಸು ಆಗಿದೆ. ಮತ್ತು ಸಿದ್ದರಾಮಯ್ಯರವರ ಬಡವರ ಮೇಲಿನ ಕಾಳಜಿಯಿಂದ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿರುವುದು ಎಂದು ಹೇಳಿದರು. ಪಂಚ ಗ್ಯಾರಂಟಿಯಿಂದ ರಾಜ್ಯವು ಇತರೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂಬ ಮಾತು ಸತ್ಯವಲ್ಲ. ಪಂಚ ಗ್ಯಾರಂಟಿ ಅನುಷ್ಠಾನವಾದ ನಂತರ ಸರ್ಕಾರ ಕೊರತೆ ಇಲ್ಲದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ತಾಲ್ಲೂಕುಗಳ ಅಭಿವೃದ್ಧಿಗೆ ವಿಧಾನಸಭಾ ಶಾಸಕರಿಗಳಿಗೆ ವಿವೇಚನ ಕೋಟವಾಗಿ 50 ಕೋಟಿ ಅನುದಾನ ನೀಡುತ್ತಿದೆ.

ಇದನ್ನು ಓದಿ : ಗ್ಯಾರಂಟಿ ಪರಿಶೀಲನಾ ಸಭೆ : ಅನರ್ಹ ಫಲಾನುಭವಿಗಳನ್ನು ಕೈಬಿಡಲು ಸಿಎಂ ಸೂಚನೆ

ಜಿಲ್ಲೆಯಲ್ಲಿ ಮೈಶುಗರ್ ಕಾರ್ಖಾನೆ ಅಭಿವೃದ್ದಿಗೆ ಹಾಗೂ ಕೃಷಿ ವಿಶ್ವವಿದ್ಯಾಲಯಕ್ಕಾಗಿ ನೂರಾರು ಅನುದಾನ ನೀಡಿದೆ ಎಂದು ವಿವರಿಸಿದರು. ಕರ್ನಾಟಕದ ಪಂಚ ಗ್ಯಾರಂಟಿ ಇತರೆ ರಾಜ್ಯಗಳು ಸ್ಫೂರ್ತಿಯಾಗಿದೆ ಮತ್ತು ದೇಶದಲ್ಲಿಯೇ ಕರ್ನಾಟಕದ ತಲಾ ಆದಾಯ ನಂಬರ್ ಒನ್ ಸ್ಥಾನ ಪಡೆದಿದೆ. ಐದು ವರ್ಷಗಳ ಕಾಲ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿಸುವಲ್ಲಿ ಸರ್ಕಾರ ಕೆಲಸ ನಿರ್ವಹಿಸುತ್ತದೆ. ಎಂದಿಗೂ ಕೊಟ್ಟ ಮಾತನ್ನ ತಪ್ಪುವುದಿಲ್ಲ ಎಂದರು. ಜಿಲ್ಲೆಯಲ್ಲಿ ಪ್ರತಿ ತಿಂಗಳು ಒಂದೊಂದು ಗ್ರಾಮ ಎಂಬುವಂತೆ ಜನ ಸಾಮಾನ್ಯರ ಗ್ಯಾರಂಟಿ ಸಮಸ್ಯೆ, ಶಿಕ್ಷಣ, ಆರೋಗ್ಯ ಹಾಗೂ ಇತರ ಸಮಸ್ಯೆಗಳನ್ನು ಆಲಿಸಲು ಪಂಚಾಯಿತಿ ಮಟ್ಟದಲ್ಲಿ ಜನ ಸ್ಪಂದನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿವುದು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್. ಎಂ ರೇವಣ್ಣ ಮಾತನಾಡಿ, ಕರ್ನಾಟಕ ರಾಜ್ಯ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಸರ್ಕಾರದ ಪಾತ್ರ ಮಹತ್ವವಾದದ್ದು, ಉಳುವವನಿಗೆ ಭೂಮಿ ನೀಡುವುದು, ಪಡಿತರ ವೇತನ, ವೃದ್ದಾಪ್ಯವೇತನ, ರೈತರಿಗಾಗಿ ಕರೆಂಟ್ ಸೌಲಭ್ಯ, ಅನ್ನಭಾಗ್ಯ, ಮಾನವ ಸಂಪನ್ಮೂಲ ಅಭಿವೃದ್ಧಿ ಹೀಗೆ ಹತ್ತು ಹಲವು ಸೌಲಭ್ಯ ಮತ್ತು ಯೋಜನೆಗಳನ್ನು ರಾಜ್ಯಕ್ಕೆ ಸರ್ಕಾರ ಕೊಡುಗೆಯಾಗಿ ನೀಡಿದೆ ಎಂದರು. ಪ್ರಸ್ತುತ ಪಂಚ ಗ್ಯಾರಂಟಿ ಯೋಜನೆಯು ರಾಜ್ಯ ಸರ್ಕಾರದ ಇತಿಹಾಸಕ್ಕೆ ಮತ್ತೊಂದು ಕೊಡುಗೆಯಾಗಿದೆ. ಪಂಚ ಗ್ಯಾರಂಟಿ ಯೋಜನೆಯನ್ನು ಜಿಲ್ಲೆಯಲ್ಲಿನ ಜನ ಸಾಮನ್ಯರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ.

ಸಾರ್ವಜನಿಕರಿಗೆ ಪಂಚ ಗ್ಯಾರಂಟಿ ಯೋಜನೆ ಸೌಲಭ್ಯ ಪಡೆಯುವಲ್ಲಿ ಯಾವುದೇ ಸಮಸ್ಯೆ ಉಂಟಾದರು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಂಘಟನೆಯನ್ನು ಭೇಟಿ ಮಾಡಬಹುದು ಹಾಗೂ ಪ್ರಸ್ತುತ ಐಟಿ ಜಿಎಸ್ ಟಿ ಸಮಸ್ಯೆಯಿಂದ ಗೃಹಲಕ್ಷ್ಮಿ ಹಣ ಪಡೆಯುವಲ್ಲಿ ಉಂಟಾಗಿರುವ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ತಿಳಿಸಿದರು. ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳೀಗೌಡ ಮಾತನಾಡಿ, ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಯಲ್ಲಿ ನಾಲ್ಕು ಗ್ಯಾರಂಟಿಗಳು ಮಹಿಳೆಯರ ಪರವಾಗಿದ್ದು, ಗ್ಯಾರಂಟಿ ಯೋಜನೆ ನಿಲ್ಲಬೇಕು ಎಂಬ ಮಾತಿಗೆ ನೀವು ಧ್ವನಿಯಾಗಬೇಕು ಎಂದು ಮಹಿಳೆಯರಿಗೆ ಹೇಳಿದರು.

ಇದನ್ನು ಓದಿ: ಗ್ಯಾರಂಟಿ ಯೋಜನೆ ಬಿಟ್ಟರೆ ಅವರ ಬಾಯಲಿ ಏನೂ ಬರಲ್ಲ: ಸಂಸದ ಯದುವೀರ್‌ ಒಡೆಯರ್‌

ಕರೋನದಿಂದ ದೇಶ ರಾಜ್ಯ ಬಳಲುತ್ತಿದ್ದ ಸಂದರ್ಭದಲ್ಲಿ ಜನರಿಗೆ ಅನುಕೂಲವಾಗಬೇಕೆಂದು ಗ್ಯಾರಂಟಿ ಯೋಜನೆಯ ಚಿಂತನೆ ಪ್ರಾರಂಭವಾಗಿದ್ದು. ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಫಲಾನುಭವಿಗಳಿಗೆ ಇದುವರೆಗೆ 57,500 ಸಾವಿರ ಕೋಟಿ ಹಣವನ್ನು ಸರ್ಕಾರ ನೀಡಿದೆ. ಗೃಹಜ್ಯೋತಿ ಯೋಜನೆಯಡಿ 1 ಕೋಟಿ 67 ಲಕ್ಷ ಮನೆಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಿದೆ. ಶಕ್ತಿ ಯೋಜನೆಯ ಮೂಲಕ ಮಹಿಳೆಯರು 590 ಕೋಟಿ ಟಿಕೆಟ್ ಪಡೆದು ಉಚಿತ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 15 ಸಾವಿರ ಕೋಟಿ ಹಣ ನೀಡಿದ್ದು, ಯುವನಿಧಿಯಡಿ 2 ಲಕ್ಷದ 67 ಸಾವಿರ ಫಲಾನುಭವಿಗಳಿಗೆ 677 ಕೋಟಿ ಹಣವನ್ನು ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆ ಕುರಿತು ಸಾಕ್ಷ್ಯ ಚಿತ್ರ ಪ್ರದರ್ಶಿಸಲಾಯಿತು ಮತ್ತು ಗೃಹಲಕ್ಷ್ಮಿ ಹಣದಿಂದ ಸರ್ಕಾರಿ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿರುವ ಶ್ರೀರಂಗಟ್ಟಣ ತಾಲ್ಲೂಕಿನ ವಿಜಯಲಕ್ಷ್ಮಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಮಂಡ್ಯ ವಿಧಾನಸಭಾ ಕ್ಷೇತ್ರ ಶಾಸಕ ರವಿಕುಮಾರ್, ಮದ್ದೂರು ವಿಧಾನಸಭಾ ಕ್ಷೇತ್ರ ಶಾಸಕ ಕೆ. ಎಂ ಉದಯ್, ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷ ಸಿ. ಡಿ ಗಂಗಾಧರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನಯೀಮ್, ಕರ್ನಾಟಕ ಸಣ್ಣಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸೂರಜ್ ಹೆಗ್ಡೆ, ಡಾ. ವಾಸು, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ. ಆರ್ ನಂದಿನಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Tags:
error: Content is protected !!