Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

25 ವರ್ಷಗಳ ನಂತರ ನ.7ರಂದು ‘ಯಜಮಾನ’ ಮರು ಬಿಡುಗಡೆ

25 ವರ್ಷಗಳ ಹಿಂದೆ, ಅಂದರೆ 2000ನೇ ಇಸವಿಯಲ್ಲಿ ವಿಷ್ಣುವರ್ಧನ್‍ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಇದೀಗ ಹೊಸ ತಂತ್ರಜ್ಞಾನದಲ್ಲಿ ಚಿತ್ರವನ್ನು ಇದೇ ನವೆಂಬರ್.7ರಂದು ರಾಜ್ಯಾದ್ಯಂತ ಮರು ಬಿಡುಗಡೆ ಮಾಡಲಾಗುತ್ತಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ.

ಈ ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಚಿತ್ರದ ನಿರ್ಮಾಪಕರು, ಕಲಾವಿದರು ಹಾಗೂ ತಂತ್ರಜ್ಞರು ಸಮಾರಂಭದಲ್ಲಿ ಭಾಗಿಯಾಗಿದ್ದರು. ‘ಯಜಮಾನ’ ಚಿತ್ರದ ಕುರಿತು ನೆನಪಿನ ಬುತ್ತಿ ಬಿಚ್ಚಿಟ್ಟರು.

ಇದನ್ನೂ ಓದಿ:-ಬಿಹಾರದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ರೆಹಮಾನ್, ‘ಈ ಚಿತ್ರ ಆಗಲು ಪ್ರಮುಖ ಕಾರಣ ವಿಷ್ಣುವರ್ಧನ್ ಹಾಗೂ ಕೆ.ವಿ. ನಾಗೇಶ್ ಕುಮಾರ್. 130ಕ್ಕೂ ಹೆಚ್ಚು ಕಡೆ ಶತದಿನೋತ್ಸವ, 40ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 25 ವಾರ ಹಾಗೂ 4 ಕಡೆಗಳಲ್ಲಿ 1 ವರ್ಷ ಈ ಸಿನಿಮಾ ಓಡಿದೆ. 25 ವರ್ಷಗಳ ಹಿಂದೆಯೇ 35 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದ ಚಿತ್ರವಿದು. ಈ ಚಿತ್ರವನ್ನು ಈಗ ಮುನಿಸ್ವಾಮಿ ಅವರು ಮರು ಬಿಡುಗಡೆ ಮಾಡುತ್ತಿದ್ದಾರೆ. ಹಿಂದೆ ನೀವು ನೀಡಿದ ಗೆಲುವಿಗಿಂತ ದೊಡ್ದ ಗೆಲುವನ್ನು ಈಗ ನೀಡಿ’ ಎಂದರು‌.

‘ಯಜಮಾನ’ ಚಿತ್ರವನ್ನು DI ಬಳಸಿ 4K ಡಿಜೆಟಲ್ ಪ್ರೊಜೆಕ್ಷನ್‍ಗೆ ತಯಾರು ಮಾಡಲಾಗಿದೆ. ಇನ್ನು, ಮೋನೊ ಟ್ರ್ಯಾಕ್ ನಲ್ಲಿದ್ದ ಈ ಚಿತ್ರದ ಕಲಾವಿದರ ಧ್ವನಿಗಳನ್ನು ಸಹ 5.1 ಹಾಗೂ 7.1 ಡಿಜಿಟಲ್ ಸೌಂಡ್‍ಗೆ ವರ್ಗಾಯಿಸಲಾಗಿದೆ. ‘ಯಜಮಾನ’ ಚಿತ್ರದಲ್ಲಿ ವಿಷ್ಣುವರ್ಧನ್‍ ಜೊತೆಗೆ ಪ್ರೇಮ, ಶಶಿಕುಮಾರ್, ಅಭಿಜಿತ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ಮೆಹರುನ್ನಿಸಾ ರೆಹಮಾನ್ ನಿರ್ಮಿಸಿದ್ದು, ಆರ್ ಶೇಷಾದ್ರಿ – ರಾಧಾ ಭಾರತಿ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ರಾಜೇಶ್‍ ರಾಮನಾಥ್‍ ಸಂಗೀತವಿದೆ.

Tags:
error: Content is protected !!