Mysore
15
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಜೆಎಲ್‌ಬಿ-ವಿನೋಬ ರಸ್ತೆಯಲ್ಲಿ ಫ್ಲೈಓವರ್‌ ನಿರ್ಮಾಣ ಮಾಡುವುದು ಬೇಡ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಮೈಸೂರಿನ ಜೆಎಲ್‌ಬಿ-ವಿನೋಬ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿರುವುದರಿಂದ ಅಲ್ಲಿ ಫ್ಲೈಓವರ್‌ ನಿರ್ಮಾಣ ಮಾಡುವುದು ಬೇಡ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ಸಾಯಿಲ್ ಟೆಸ್ಟ್ ಮಾಡ್ತಿದ್ದಾರೆ ಇದಕ್ಕೆ ನಮ್ಮ ವಿರೋಧವಿದೆ. ಜೆಎಲ್‌ಬಿ ರಸ್ತೆ, ವಿನೋಬ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ಧಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ. ವಿನೋಬ ರಸ್ತೆಯಲ್ಲಿ ಫ್ಲೈ ಓವರ್ ನಿರ್ಮಿಸಲು ಮುಂದಾದರೆ ಮರಗಳ ಹನನ ಆಗಲಿದೆ. ಹಾಗಾಗಿ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಮಾಡಬಾರದು. ಅಭಿವೃದ್ಧಿ ನೆಪದಲ್ಲಿ ಮೈಸೂರಿನ ಸೌಂದರ್ಯ ಹಾಳು ಮಾಡಬಾರದು. ಪಾರಂಪರಿಕ ನಗರಿಯ ಗುರುತು ಉಳಿಸಿಕೊಳ್ಳಬೇಕು. ಸಿಎಂ ಕೂಡ ಗ್ರೇಟರ್ ಮೈಸೂರು ಸಭೆಯಲ್ಲಿ ಮೈಸೂರಿನ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಸಿಎಂ ಅವರ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕು. ಫ್ಲೈಓವರ್ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ. ಮೆಟ್ರೋ ಮಾರ್ಗ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಮುಂಬೈ ಮಾದರಿಯಲ್ಲಿ ಅಂಡರ್ ಗ್ರೌಂಡ್‌ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ. ಮೈಸೂರಿನ ಜನಸಂಖ್ಯೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಲಿ. ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಮಾಡಲಿ. ಜನರ ವಿರೋಧದ ನಡುವೆ ಫ್ಲೈಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಜನರ ಸಹಕಾರದೊಂದಿಗೆ ಹೋರಾಟ ರೂಪಿಸುತ್ತೇವೆ. ಗ್ರೇಟರ್ ಮೈಸೂರಿನಿಂದ ಒಳಿತಾಗಲಿದೆ. ಆದರೆ ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಬೆಂಗಳೂರು ಮಾದರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಬಾರದು ಎಂದು ಹೇಳಿದರು.

ಇದನ್ನು ಓದಿ: ಕೇಂದ್ರೀಯ ಬಸ್‌ ನಿಲ್ದಾಣಕ್ಕೇ ವಿಶ್ವ ದರ್ಜೆ ಸೌಲಭ್ಯ ಕಲ್ಪಿಸಿ

ಇನ್ನು ಬೆಳಗಾವಿಯಲ್ಲಿ ರೈತರು ಪ್ರತಿಭಟನೆ ಮಾಡ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಬ್ಬಿನ ಬೆಲೆ ನಿಗದಿ ಮಾಡಬೇಕು. ರೈತರ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು ಅದು ಸರ್ಕಾರದ ಕರ್ತವ್ಯ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲ್ಸ ಮಾಡ್ತಿದ್ದಾರೆ. ಈ ಹಿಂದಿನಿಂದಲೂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆಯೇ ಆರೋಪ ಮಾಡೋದು. ಅದನ್ನು ಬಿಟ್ಟು ರೈತರ ಸಮಸ್ಯೆ ಬಗೆಹರಿಸಲಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಇನ್ನು ಮೈಸೂರಿನಲ್ಲಿ ಹುಲಿಗಳ ದಾಳಿ ಹೆಚ್ಚಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅರಣ್ಯ ಇಲಾಖೆ ರೈತರಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು. ದತ್ತಾಂಶಗಳನ್ನು ನೋಡಬೇಕು. ಅರಣ್ಯದಲ್ಲಿ ಹುಲಿಗಳ ಸಂಖ್ಯೆ ಎಷ್ಟಿದೆ ಎಲ್ಲವನ್ನೂ ನೋಡಬೇಕು. ಪ್ರಕೃತಿ ಪ್ರಕೃತಿಯನ್ನು ಕಾಪಾಡಿಕೊಳ್ಳುತ್ತೆ. ಮನುಷ್ಯ ಪ್ರಕೃತಿಗೆ ಕೈ ಹಾಕೋದು ಬೇಡ ಹುಲಿಗಳ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಬೇಕು. ಒಳ್ಳೆಯ ಯೋಜನೆ ರೂಪಿಸಬೇಕು. ಜನರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು 10% ಜನ ದೇಶದ ಸೇನೆ ನಿಭಾಯಿಸುತ್ತಿದ್ದಾರೆ ಎಂಬ ರಾಹುಲ್ ಗಾಂಧಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಸುಳ್ಳನ್ನು ಸತ್ಯ ಮಾಡಲು ಹೋಗ್ತಾರೆ. ಸುಳ್ಳು ಎಷ್ಟು ಬಾರಿ ಹೇಳಿದ್ರು ಅದು ಸುಳ್ಳೇ. ಅದು ಎಂದಿಗೂ ಸತ್ಯ ಆಗಲ್ಲ. ಅವರ ಹೇಳಿಕೆಗಳು ಯಾವಾಗಲೂ ಇದೇ ಇರುತ್ತದೆ. ಇದು ಸರಿಯಲ್ಲ ಎಂದು ಹೇಳಿದರು.

Tags:
error: Content is protected !!