Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ನವೆಂಬರ್.‌15ರಿಂದ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ನವೆಂಬರ್.‌15ರಿಂದ ಲಕ್ಷ ದೀಪೋತ್ಸವ ನಡೆಯಲಿದೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಮಂಜುನಾಥಸ್ವಾಮಿಯ ವಾರ್ಷಿಕ ಲಕ್ಷ ದೀಪೋತ್ಸವ ನಡೆಯಲಿದೆ.

ನವೆಂಬರ್.‌15ರಿಂದ 20ರವರೆಗೆ ಲಕ್ಷ ದೀಪೋತ್ಸವ ನಡೆಯಲಿದ್ದು, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದನ್ನು ಓದಿ: ರಾಮನಗರಿ ಅಯೋಧ್ಯೆಯಲ್ಲಿ ಅದ್ಭುತ ದೀಪೋತ್ಸವ

ನವೆಂಬರ್.‌15ರಂದು ಬೆಳಿಗ್ಗೆ ಧರ್ಮಸ್ಥಳ ಪ್ರೌಢಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆಯಾಗಲಿದೆ. ಸಂಜೆ ಭಕ್ತರಿಂದ ಉಜಿರೆ ಜನಾರ್ಧನ ಸ್ವಾಮಿ ಸನ್ನಿಧಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಗೆ ಭಕ್ತಿ ಭಜನೆ ಪಾದಯಾತ್ರೆ ನಡೆಯಲಿದೆ. ಅಂದು ರಾತ್ರಿ ಶ್ರೀ ಮಂಜುನಾಥ ಸ್ವಾಮಿಗೆ ಹೊಸ ಕಟ್ಟೆ ಉತ್ಸವ, ನವೆಂಬರ್.‌16ರಂದು ಕರೆಕಟ್ಟೆ ಉತ್ಸವ ನಡೆಯಲಿದೆ.

ನವೆಂಬರ್.‌17ರಂದು ಲಲಿತೋದ್ಯಾನ ಉತ್ಸವ, ಅಮೃತವರ್ಷಿಣಿ ಸಭಾಭವನದಲ್ಲಿ ಲಲಿತಾ ಕಲಾಗೋಷ್ಠಿ ನಡೆಯಲಿದೆ. ನವೆಂಬರ್.‌18ರಂದು ಕಂಚಿ ಮಾರುಕಟ್ಟೆ ಉತ್ಸವ, ಸರ್ವಧರ್ಮ ಸಮ್ಮೇಳನ, ನವೆಂಬರ್.‌19ರಂದು ಗೌರಿ ಮಾರುಕಟ್ಟೆ ಉತ್ಸವ ಹಾಗೂ ಸಾಹಿತ್ಯ ಸಮ್ಮೇಳನ, ನವೆಂಬರ್‌.20ರಂದು ಶ್ರೀ ಚಂದ್ರನಾಥ ಸ್ವಾಮಿ ಸಮ ವಸರಣ ಪೂಜೆಯೊಂದಿಗೆ ಲಕ್ಷ ದೀಪೋತ್ಸವಕ್ಕೆ ತೆರೆ ಬೀಳಲಿದೆ. ಲಕ್ಷ ದೀಪೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರಯ ಆಗಮಿಸಲಿದ್ದಾರೆ.

Tags:
error: Content is protected !!