Mysore
19
broken clouds

Social Media

ಶುಕ್ರವಾರ, 23 ಜನವರಿ 2026
Light
Dark

ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಪ್ರಕರಣ: ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಆರ್.ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ ಅವರು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಮೃತ ರೈತನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಇದನ್ನು ಓದಿ: ಕರ್ನೂಲ್‌ ಬಸ್‌ ದುರಂತ | ಮುರ್ಮು, ಮೋದಿ ಸಂತಾಪ ; ಮೃತ ಕುಟುಂಬಕ್ಕೆ 2 ಲಕ್ಷ ಪರಿಹಾರ

ನಂತರ ಮೃತ ರೈತನ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಣೆ ಮಾಡಿದರು. ಹೆಚ್ಚುವರಿ ಪರಿಹಾರ ಕೊಡಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನೀಡಲಾಗುವುದು ಎಂದು ಭರವಸೆ ನೀಡಿದರು.

ಮೃತ ರೈತನ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸದರಿ ಜಾಗವನ್ನು ಜಂಟಿ ಸರ್ವೆ ನಡೆಸಿ ಸ್ಥಳವೇನಾದರೂ ಅರಣ್ಯ ಇಲಾಖೆಗೆ ಸೇರದಿದ್ದರೆ, ಸದರಿ ಜಾಗವನ್ನು ಕುಟುಂಬಸ್ಥರಿಗೆ ನೀಡುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!