ಮೈಸೂರು: ಜಿಲ್ಲೆಯ ಸರಗೂರು ತಾಲ್ಲೂಕಿನ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ನವೆಂಬರ್.16ರಿಂದ 18ರವರೆಗೆ ನಡೆಯಲಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಡೆಯ ಕಾರ್ತಿಕ ಸೋಮವಾರದಂದು ಕೊಂಡೋತ್ಸವ ಅದ್ಧೂರಿಯಾಗಿ ಜರುಗಲಿದೆ.
ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದೆ.
ನಂಜನಗೂಡು ತಾಲ್ಲೂಕಿನ ಯಡಿಯಾಲದಿಂದ ಹಾದನೂರು ಮಾರ್ಗವಾಗಿ ದೇವಾಲಯದವರೆಗೆ ಹಾಗೂ ದೇವಸ್ಥಾನ ಆವರಣದ ಸುತ್ತ ಬ್ಯಾರಿಕೇಡ್‌ಗಳನ್ನು ಇರಿಸಿ ವಾಹನ ಹಾಗೂ ಸಾರ್ವಜನಿಕರ ಸುಗಮ ಓಡಾಟಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.





