Mysore
21
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ

ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.

ರೈತರ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾಥ್‌ ನೀಡಿದ್ದ ಬೆನ್ನಲ್ಲೇ ಸರ್ಕಾರವು ರೈತರೊಂದಿಗೆ ಮಾತುಕತೆಗೆ ಮುಂದಾಗಿತ್ತು.

ಇದನ್ನು ಓದಿ: ಬೆಳಗಾವಿಯಲ್ಲಿ ಉಗ್ರ ಸ್ವರೂಪ ಪಡೆದ ಅನ್ನದಾತರ ಪ್ರತಿಭಟನೆ

ಸಚಿವ ಎಚ್.ಕೆ.ಪಾಟೀಲ್‌ ಅವರು ರೈತ ಮುಖಂಡರ ಜೊತೆ ಮಾತಯಕತೆ ನಡೆಸಿ ಮನವೊಲಿಸುವ ಯತ್ನ ನಡೆಸಿದರು. ಆದರೆ ಸಚಿವರು ನಡೆಸಿದ ಸಂಧಾನ ಸಭೆ ಸಂಪೂರ್ಣ ವಿಫಲವಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಕೂಡ ರೈತರು ಹೋರಾಟ ಮುಂದುವರಿಸಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಪ್ರತಿಭಟನೆ ಹಿಂಪಡೆಯುತ್ತೇವೆ. ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!