Mysore
23
clear sky

Social Media

ಬುಧವಾರ, 21 ಜನವರಿ 2026
Light
Dark

ನವೆಂಬರ್‌ ಕ್ರಾಂತಿ ಬಗ್ಗೆ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದೇನು?

ಮೈಸೂರು : ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಆಗಲ್ಲ ವಾಂತಿಯೂ ಆಗಲ್ಲ. ನನಗೆ ಸಿದ್ದರಾಮಯ್ಯನವರ ಗುಣ ಗೊತ್ತಿದೆ. ಅವರು ನಮ್ಮ ಪಕ್ಷದಲ್ಲೇ ಇದ್ದಾಗಲೇ ಅವರ ಗುಣ ತಿಳಿದುಕೊಂಡಿದ್ದೇನೆ. ಹೀಗಾಗಿ ಯಾವ ಬದಲಾವಣೆಯೂ ಅಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಹಾಗೂ ನವೆಂಬರ್ ಕ್ರಾಂತಿ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದಾಗ ಪ್ರತಿಕ್ರಿಯಿಸಿ,ಡಿ.ಕೆ ಶಿವಕುಮಾರ್ ಯಾವಾಗಲೂ ದೇವರ ಜೊತೆ ಮಾತನಾಡುತ್ತಾರೆ. ದೇವರು ಅವರಿಗೆ ಏನೇನು ಹೇಳಿದ್ದಾನೋ ನಮಗೇನು ಗೊತ್ತು? ಅದೇನಿದ್ದರೂ ಡಿ.ಕೆ. ಶಿವಕುಮಾರ್ ಹಾಗೂ ದೇವರಿಗೆ ಸಂಬಂಧಪಟ್ಟ ವಿಚಾರ. ಹಾಗಂತ ಡಿಕೆಶಿ ಅವವ್ರೇ ಹೇಳಿದ್ದಾರೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

೨೦೨೮ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ೨೦, ೧೦ ವರ್ಷ ನಾವೇ ಎಂದು ಹೇಳಿದವರು ಏನಾಗಿದ್ದಾರೆ ಎಂಬುದು ನನಗೆ ಗೊತ್ತಿದೆ. ೨೦೨೮ಕ್ಕೆ ಏನೇನಾಗುತ್ತೊ ಯಾರಿಗೆ ಗೊತ್ತು ಬಿಡಿ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ:-ಕೆಆರ್‌ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ : ತೆರವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ

ಸಿಎಂ ಸಿದ್ದರಾಮಯ್ಯ ಅವರು ಮೈಸೂರು ನಗರವನ್ನು ಗ್ರೇಟರ್ ಮೈಸೂರು ಮಾಡುತ್ತಾರೆ ಎಂದು ಹೇಳಿದ್ದಾರೆ ಎಂಬ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಇದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಪೈಪೋಟಿ. ಡಿಕೆಶಿ ಮೇಲಿನ ಪೈಪೋಟಿಗಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಘೋಷಣೆ ಮಾಡಿದ್ದಾರೆ. ಅಲ್ಲಿ ಡಿ.ಕೆ. ಶಿವಕುಮಾರ್ ಗ್ರೇಟರ್ ಬೆಂಗಳೂರು ಘೋಷಣೆ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಎನ್ನುತ್ತಿದ್ದಾರೆ. ಯಾವ ಗ್ರೇಟರ್ ಕೂಡಾ ಆಗುವುದಿಲ್ಲ. ಇವರು ಸುಮ್ಮನೆ ಕಾಲಾಹರಣ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.

Tags:
error: Content is protected !!