ಮಂಡ್ಯ: ರೌಡಿಶೀಟರ್ ಪಟ್ಟಿಗೆ ಸೇರಿಸುವುದಾಗಿ ಬೆದರಿಸಿ ಆರೋಪಿಯಿಂದ ಲಂಚ ಪಡೆಯುತ್ತಿದ್ದ ಮಳವಳ್ಳಿ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಾಮೀನು ಪಡೆದು ಬಿಡುಗಡೆಯಾಗಿದ್ದ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ನವೀನ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ರೌಡಿಶೀಟರ್ ಪಟ್ಟಿಗೆ ಸೇರಿಸುವುದಾಗಿ ಬೆದರಿಸಿ ವೆಂಕಟೇಶ್ 5000ರೂ ಲಂಚ ಕೇಳಿರುವುದಾಗಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಗುರುವಾರ ರಾತ್ರಿ ಪೊಲೀಸ್ ಠಾಣೆ ಎದುರಿನ ಹೋಟೆಲ್‌ವೊಂದರ ಸಮೀಪ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.





