Mysore
20
scattered clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಡಿಸೆಂಬರ್.‌1ರಿಂದ 19ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ

Monsoon session of Parliament begins tomorrow

ನವದೆಹಲಿ: ಸಂಸತ್‌ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಡಿಸೆಂಬರ್.‌1ರಿಂದ 19ರವರೆಗೆ ಅಧಿವೇಶನ ನಡೆಯಲಿದೆ.

ಈ ಕುರಿತು ಕೇಂದ್ರ ಸಚಿವ ಕಿರಣ್‌ ರಿಜಿಜು ಮಾಹಿತಿ ನೀಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್.‌1ರಿಂದ 19ರವರೆಗೆ ನಡೆಸುವ ಸರ್ಕಾರದ ಪ್ರಸ್ತಾವನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ. ಇದು ಸಂಸತ್ತಿನ ವ್ಯವಹಾರಗಳ ಅಗತ್ಯಗಳಿಗೆ ಒಳಪಟ್ಟಿರುತ್ತದೆ.

ಟ್ವೀಟ್‌ ಮಾಡಿ ಮಾಹಿತಿ ನೀಡಿದ ಕಿರಣ್‌ ರಿಜಿಜು ಅವರು, ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್.‌1 ರಿಂದ ಡಿಸೆಂಬರ್.‌19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ.

ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಜನರ ಆಕಾಂಕ್ಷೆಗಳನ್ನು ಪೂರೈಸುವ ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ ಎಂದು ಮಾಹಿತಿ ನೀಡಿದರು.

Tags:
error: Content is protected !!