Mysore
17
clear sky

Social Media

ಗುರುವಾರ, 22 ಜನವರಿ 2026
Light
Dark

ಕೈದಿಗಳಿಗೆ ಮುಂದುವರಿದ ರಾಜಾತಿಥ್ಯ..? : ವಿಕೃತಕಾಮಿ ಉಮೇಶ್ ರೆಡ್ಡಿ ಬಿಂದಾಸ್ ಲೈಫ್ ವಿಡಿಯೋ ವೈರಲ್

ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಕೃತಕಾಮಿ ಉಮೇಶ್‌ರೆಡ್ಡಿ ಹಾಗೂ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ತರುಣ್‌ರಾಜ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಕಾರಾಗೃಹದಲ್ಲಿರುವ ಲಷ್ಕರ್ ಉಗ್ರನ ಕೈಯಲ್ಲಿ ಅಂಡ್ರಾಯಿಡ್ ಮೊಬೈಲ್ ಇರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಹಿಂದೆ ನಟ ದರ್ಶನ್‌ಗೆ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಖಡಕ್ ಆದೇಶ ನೀಡಿತ್ತು. ಹೀಗಿದ್ದರೂ ಈ ಕಾರಾಗೃಹದಲ್ಲಿ ಕೈದಿ ಹಾಗೂ ವಿಚಾರಣಾ ಕೈದಿಗಳಿಗೆ ಮೊಬೈಲ್ ಜೊತೆಗೆ ಸೆಲ್‌ನಲ್ಲಿ ಟಿವಿ ವ್ಯವಸ್ಥೆ ಸೇರಿದಂತೆ ವಿಶೇಷ ಸೌಲಭ್ಯಗಳು ಲಭ್ಯವಾಗುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನು ಓದಿ: ‘ಬಾಸ್‍’ ಆಗಿ ಬಂದ ತನುಷ್ ಶಿವಣ್ಣ; ಈ ಚಿತ್ರಕ್ಕೂ ದರ್ಶನ್‍ ಪ್ರಕರಣಕ್ಕೂ ಸಂಬಂಧವಿದೆಯಾ?

ನಟ ದರ್ಶನ್ ಅವರಿಗೆ ಕಾರಾಗೃಹದಲ್ಲಿ ಹಾಸಿಗೆ ಮತ್ತು ದಿಂಬು ಪಡೆಯಲು ಕಷ್ಟವಾಗುತ್ತಿರುವ ಸಂದರ್ಭದಲ್ಲಿ ವಿಕೃತಕಾಮಿ ಉಮೇಶ್ ರೆಡ್ಡಿ ಜೈಲಿನೊಳಗೆ ಮೊಬೈಲ್‌ನಲ್ಲಿ ಮಾತನಾಡುತ್ತಿರುವುದು, ಟಿವಿ ವೀಕ್ಷಿಸುತ್ತಿರುವ ವಿಡಿಯೋ ಕಂಡು ಬಂದಿದೆ. ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ವಿಕೃತಕಾಮಿ ಉಮೇಶ್‌ರೆಡ್ಡಿ ಟಿವಿ ನೋಡುತ್ತಾ ಕೀಪ್ಯಾಡ್ ಮೊಬೈಲ್‌ಗಳನ್ನು ಇಟ್ಟುಕೊಂಡು ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಇನ್ನೂ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿತನಾಗಿರುವ ರನ್ಯಾರಾವ್ ಸ್ನೇಹಿತ ಆರೋಪಿ ತರುಣ್ ರಾಜ್ ಕಾರಾಗೃಹದೊಳಗೆ ಟಿವಿ ನೋಡುತ್ತಾ ಬಿಂದಾಸ್ ಲೈಫ್ ನಡೆಸುತ್ತಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Tags:
error: Content is protected !!