Mysore
19
scattered clouds

Social Media

ಸೋಮವಾರ, 26 ಜನವರಿ 2026
Light
Dark

ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳಲ್ಲಿ ಪ್ರಬಲ ಭೂಕಂಪ

ನವದೆಹಲಿ: ಇಂದು ಮಧ್ಯಾಹ್ನ 12 ಗಂಟೆ ವೇಳೆ ಅಂಡಮಾನ್‌ ಸಮುದ್ರದಲ್ಲಿ 5.4 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ.

ಅಂಡಮಾನ್‌ ಹಾಗೂ ನಿಕೋಬಾರ್‌ ದ್ವೀಪಗಳ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಆದರೆ ಯಾವುದೇ ಸಾವು-ನೋವುಗಳು ಅಥವಾ ದೊಡ್ಡ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. ಸ್ಥಳೀಯ ಅಧಿಕಾರಿಗಳು, ನಿವಾಸಿಗಳು ಶಾಂತವಾಗಿರಲು ಮತ್ತು ಸುರಕ್ಷತಾ ಫ್ರೋಟೋಕಾಲ್‌ಗಳನ್ನು ಅನುಸರಿಸಲು ಸಲಹೆ ನೀಡಿದ್ದಾರೆ.

ಇಂಡೋ-ಆಸ್ಟ್ರೇಲಿಯನ್‌ ಮತ್ತು ಯುರೇಷಿಯನ್‌ ಟೆಕ್ಟೋನಿಕ್‌ ಪ್ಲೇಟ್‌ಗಳ ಚಲನೆಯಿಂದಾಗಿ ಈ ಪ್ರದೇಶವು ಭೂಕಂಪನದಿಂದ ಸಕ್ರಿಯವಾಗಿದೆ ಎಂದು ಭೂಕಂಪನಶಾಸ್ತ್ರಜ್ಞರು ಗಮನಿಸಿದ್ದಾರೆ.

Tags:
error: Content is protected !!