Mysore
28
few clouds

Social Media

ಬುಧವಾರ, 21 ಜನವರಿ 2026
Light
Dark

ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ : ಮೂವರು ವೈದ್ಯರ ಬಂಧನ

ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮೂವರು ವೈದ್ಯರನ್ನು ಬಂಧಿಸಿದ್ದಾರೆ.

ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದಲ್ಲಿ ಹಲವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೃತ್ಯದ ಹಿಂದೆ ಮಹಿಳಾ ಉಗ್ರರು, ವೈಟ್‌ ಕಾಲರ್‌ ಉಗ್ರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಇದನ್ನು ಓದಿ : ದೆಹಲಿ ಕಾರು ಸ್ಫೋಟ ಪ್ರಕರಣಕ್ಕೆ ಪುಲ್ವಾಮಾ ನಂಟು?

ಡಾ.ಶಾಹಿನ್‌ ಹಾಗೂ ಡಾ.ಸಜ್ಜದ್‌ ಎಂಬುವವರೇ ಬಂಧಿತ ವೈದ್ಯರಾಗಿದ್ದಾರೆ. ಡಾ.ಶಾಹಿನ್‌ ವೈದ್ಯೆಯಾಗಿದ್ದುಕೊಂಡೇ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.

ಡಾ.ಸಜ್ಜದ್‌ ಎಂಬ ವೈದ್ಯನನ್ನು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಬಂಧಿಸಲಾಗಿದ್ದು, ಮೂವರು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ವೈದ್ಯ ಉಮರ್‌ ನಬಿ ತಾಯಿ ಸೇರಿದಂತೆ 13 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ 12 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದ್ದು, 150ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!