ನಂಜನಗೂಡು : ತಾಲ್ಲೂಕಿನ ಚುಂಚನಹಳ್ಳಿ ಮತ್ತು ಹನುಮನಪುರ ಹಾಗೂ ಕೋಣನೂರು ಗ್ರಾಮಗಳ ಮದ್ಯೆ ಇರುವ ಹಾಲಸ್ತ್ರಿಕಟ್ಟೆಯಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಫೋಟೋವೊಂದನ್ನು ಎಡಿಟ್ ಮಾಡಿ ಸುಳ್ಳು ಸುದ್ದಿಯನ್ನು ಹರಡಿಸುತ್ತಿರುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಂಜನಗೂಡು ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಮಾರುಕಟ್ಟೆ ಬಳಿ ಹುಲಿ ಕಾಣಿಸಿಕೊಂಡಿದೆ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾರೆ. ಮತ್ತೊಬ್ಬರು ಚುಂಚನಹಳ್ಳಿ ಹನುಮನಪುರ ಕೋಣನೂರು ಗ್ರಾಮಗಳ ಮದ್ಯೆ ಇರುವ ಹಾಲಸ್ತ್ರಿ ಕಟ್ಟೆಯಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಒಂದೇ ಪೋಟೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದು ಇದು ಸುಳ್ಳು ಸುದ್ದಿಯಾಗಿದೆ.
ಇದನ್ನೂ ಓದಿ :-Delhi : ಎನ್‌ಐಎ ತೆಕ್ಕೆಗೆ ಸ್ಫೋಟ ಕೇಸ್
ವಾಟ್ಸಾಪ್ ಸ್ಟೇಟಸ್ ಮತ್ತು ಫೇಸ್ಬುಕ್ ಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವುದು ಕಂಡುಬರುತ್ತಿದೆ. ಜನರಲ್ಲಿ ಭಯದ ವಾತಾವರಣವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಇಬ್ಬರ ಮೇಲೆ ದೂರು ದಾಖಲು ಮಾಡಲಾಗಿದೆ. ನಕಲಿ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಠಾಣೆಗೆ ದೂರು ನೀಡಲಾಗುತ್ತಿದೆ ಎಂದರು.





