ಹನೂರು : ಚಿರತೆ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದ ಸಮೀಪ ಸೋಮವಾರ ತಡರಾತ್ರಿ ಜರುಗಿದೆ.
ಹನೂರು ತಾಲ್ಲೂಕಿನ ಮಹದೇಶ್ವರ ವನ್ಯಜೀವಿ ವಿಭಾಗದ ವ್ಯಾಪ್ತಿಯ ಮ.ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ನಾಗಪ್ಪ ಅವರಿಗೆ ಸೇರಿದ ಕರುವನ್ನು ತಡರಾತ್ರಿ ಚಿರತೆ ದಾಳಿ ನಡೆಸಿ ಕೊಂದು ತಿಂದು ಹಾಕಿದೆ.
ಕರುವಿನ ಮೇಲೆ ಚಿರತೆ ದಾಳಿ ಮಾಡಿರುವ ವಿಚಾರ ತಿಳಿಯುತ್ತಿದ್ದಂತೆ ವಲಯ ಅರಣ್ಯ ಅಽಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಚಿರತೆಯಿಂದ ದಾಳಿಗೊಳಗಾಗಿರುವ ಕರುವಿನ ಮಾಹಿತಿ ಪಡೆದು ಇಲಾಖೆಯ ಹಿರಿಯ ಅಽಕಾರಿಗಳ ಮಾರ್ಗದರ್ಶನದಲ್ಲಿ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಇದನ್ನೂ ಓದಿ :-ಸ್ಫೋಟ | ಕೆಂಪುಕೋಟೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ
ಕಾಡುಹೊಲ ಗ್ರಾಮದಲ್ಲಿ ಚಿರತೆ ದಾಳಿಯಾಗಿದ್ದು, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಿಂದ ಬಂದಿರುವ ಚಿರತೆ ಗ್ರಾಮದ ಆಸುಪಾಸಿನಲ್ಲೇ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಚಿರತೆ ಭೀತಿಯಿಂದ ಸಂಜೆ ವೇಳೆ ತಿರುಗಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಶೀಘ್ರದಲ್ಲಿ ಚಿರತೆ ಸೆರೆ ಹಿಡಿಯಲು ಕ್ರಮ ವಹಿಸಬೇಕು. ಚಿರತೆ ಗ್ರಾಮದತ್ತ ಬಾರದಂತೆ ಕ್ರಮ ಕೈಗೊಳ್ಳಬೇಕು. ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.





