Mysore
25
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಸಿದ್ದಾಪುರ | ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಚುರುಕು

ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬರಿಯಾದ ಪ್ರಕರಣಕ್ಕೆ ಸಂಬಂಽಸಿದಂತೆ ಅರಣ್ಯ ಇಲಾಖೆಯಿಂದ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರಿದಿದೆ.

ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿಯ ಕಾಫಿ ತೋಟಗಳಲ್ಲಿ 9 ಕಾಡಾನೆಗಳ ಗುಂಪು ದಾಂಧಲೆ ನಡೆಸುತ್ತಿದೆ. ಈ ಗುಂಪಿನಲ್ಲಿದ್ದ ಒಂದು ಕಾಡಾನೆ ಸೋಮವಾರ ಕಾರ್ಮಿಕನ ಮೇಲೆ ದಾಳಿ ನಡೆಸಿ ಬಲಿ ಪಡೆದಿದೆ ಎಂದು ಹೇಳಲಾಗಿದೆ. ಸದ್ಯ ಈ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ.

9 ಕಾಡಾನೆಗಳು ಬೇರೆ ಬೇರೆಯಾಗಿ ಸಂಚರಿಸುತ್ತಿರುವುದರಿಂದ ಕಾರ್ಯಾಚರಣೆಗೆ ಅಡಚಣೆಯುಂಟಾಗಿದೆ. ಶೀಘ್ರದಲ್ಲೇ ಕಾಡಾನೆಗಳನ್ನು ಕಾಡಿಗಟ್ಟುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ನಡೆಯುತ್ತಿರುವುದರಿಂದ ಈ ವ್ಯಾಪ್ತಿಯ ನಿವಾಸಿಗಳು ಎಚ್ಚರದಿಂದ ಇರುವಂತೆ ಮನವಿ ಮಾಡಲಾಗಿದೆ.

Tags:
error: Content is protected !!