ನವದೆಹಲಿ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಇದೀಗ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ನಿನ್ನೆ ಅವರ ಸಾವಿನ ವದಂತಿಗಳು ಹರಡಿದ್ದು, ನಂತರ ಕುಟುಂಬವು ಈ ಸುದ್ದಿಯನ್ನು ನಿರಾಕರಿಸಿದೆ. ಇದೆಲ್ಲದರ ಮಧ್ಯೆ ಧರ್ಮೇಂದ್ರ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.





