Mysore
34
few clouds

Social Media

ಶನಿವಾರ, 11 ಏಪ್ರಿಲ 2026
Light
Dark

ಮತ್ತೆ ಮುನ್ನೆಲೆಗೆ ಬಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್‌ ಶಾಸಕ ರಾಜು ಕಾಗೆ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

15 ಜಿಲ್ಲೆಗಳನ್ನು ಒಳಗೊಂಡ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಿಸಲು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಭಾರೀ ಅನ್ಯಾಯ ಆಗುತ್ತಿದೆ. ಮಲತಾಯಿ ಧೋರಣೆ ಆಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ರಾಜುಕಾಗೆ ಅವರು, ಉತ್ತರ ಕರ್ನಾಟಕ ಹೋರಾಟ ಸಮಿತಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಇದನ್ನು ಓದಿ: ಪ್ರತ್ಯೇಕ ಕೊಡವ ರಾಜ್ಯ ಬೇಡಿಕೆಗೆ ಸುಬ್ರಮಣ್ಯ ಸ್ವಾಮಿ ಬೆಂಬಲ

ಉತ್ತರ ಕರ್ನಾಟಕ ಪ್ರತ್ಯೇಕವಾಗಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಪತ್ರ ಬರೆದಿದ್ದು, ಚಳಿಗಾಲದ ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.

ಇನ್ನು ಶಾಸಕ ರಾಜುಕಾಗೆ ಅವರು ಪತ್ರ ಬರೆದ ಬೆನ್ನಲ್ಲೇ ಉತ್ತರ ಕರ್ನಾಟಕ ಹೋರಾಟ ಸಮಿತಿ, ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಮೂರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿವೆ. ಒಂದು ವೇಳೆ ಮೂರು ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತ್ಯೇಕ ಧ್ವಜಾರೋಹಣ ನೆರವೇರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!