ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಚಳಿಯ ಜೊತೆಗೆ ಮಳೆಯೂ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇನ್ನು ನವೆಂಬರ್ ಮೊದಲ ವಾರದಲ್ಲಿಯೇ ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ವಾಡಿಕೆಗಿಂತ ಚಳಿಗಾಲ ಸ್ವಲ್ಪ ತಡವಾಗಿ ಶುರುವಾಗಿದೆ. ಆದರೆ ಚಳಿಯ ನಡುವೆಯೇ ಮಳೆಯೂ ಆಗಲಿದ್ದು, ವಾತಾವರಣ ಮತ್ತಷ್ಟು ಬದಲಾವಣೆಯಾಗಲಿದೆ ಎಂದು ಹೇಳಲಾಗುತ್ತಿದೆ.





