Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮೈಸೂರು | ಸಾಮೂಹಿಕ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ

ಮೈಸೂರು : ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್‌ ಬಾಕಿ ವಸೂಲಾತಿಗಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದಿಂದ ಹಮ್ಮಿಕೊಂಡಿರುವ ಸಾಮೂಹಿಕ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ ನ.14 ರಿಂದ ಆರಂಭವಾಗಲಿದೆ.

ಕೆಲವು ಗ್ರಾಹಕರು, ಗ್ರಾಮ ಪಂಚಾಯತಿ ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳನ್ನು ಒಳಗೊಂಡಂತೆ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿರುದ್ಧ ಕ್ರಮವಹಿಸಲು ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್‌ ನಿರ್ಧರಿಸಿದೆ.

ಇದನ್ನು ಓದಿ: ಮೈಸೂರು : ಸೆಸ್ಕ್‌ನಿಂದ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ

ಸೆಸ್ಕ್‌ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ನ.14, 2025ರಿಂದ ಸಾಮೂಹಿಕ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ ನಡೆಸಲಾಗುತ್ತಿದೆ. ಈ ಅಭಿಯಾನದಲ್ಲಿ ಎಲ್ಲ ಪ್ರವರ್ಗದ ವಿದ್ಯುತ್‌ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ನಿಗದಿತ ಅವಧಿಯೊಳಗೆ ವಿದ್ಯುತ್‌ ಶುಲ್ಕ ಬಾಕಿ ಪಾವತಿಸದ ಮೀಟರ್‌/ಮಾಪಕಗಳ ವಿದ್ಯುತ್‌ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೆ  ಕಡಿತಗೊಳಿಸಲಾಗುವುದು.

ಆದ್ದರಿಂದ ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಮೀಟರ್‌/ಮಾಪಕಗಳ ವಿದ್ಯುತ್‌ ಶುಲ್ಕವನ್ನು ನ.14, 2025 ರೊಳಗೆ ಸೆಸ್ಕ್‌ ಅಧಿಕೃತ ನಗದು ಕೌಂಟರ್ ಅಥವಾ ಆನ್‌ ಲೈನ್‌ ಮೂಲಕ ಕೂಡಲೇ ಪಾವತಿಸುವಂತೆ ಕೋರಲಾಗಿದೆ. ಆ ಮೂಲಕ ವಿದ್ಯುತ್ ಕಡಿತಗೊಳಿಸುವ ಕ್ರಮಕ್ಕೆ ಆಸ್ಪದ ನೀಡದಂತೆ ಗ್ರಾಹಕರು ಸಹಕರಿಸಬೇಕೆಂದು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Tags:
error: Content is protected !!