Mysore
27
clear sky

Social Media

ಬುಧವಾರ, 21 ಜನವರಿ 2026
Light
Dark

ಕಲಾಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ : ಈಶ್ವರ ಖಂಡ್ರೆ

Eshwar Khandre

ಬೆಂಗಳೂರು : ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಮರಗಳನ್ನೇ ಮಕ್ಕಳಂತೆ ಸಲಹಿ, ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕನವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಗ್ಗೆ 7.30ರಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು, ನಂತರ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಖಂಡ್ರೆ ಸ್ಪಷ್ಟನೆ

ಸಾಮಾಜಿಕ ಜಾಲ ತಾಣಗಳಲ್ಲಿ ಸರ್ಕಾರಿ ಆದೇಶವೊಂದು ಹರಿದಾಡುತ್ತಿದ್ದು ಇದು ನಕಲಿ ಆಗಿರುತ್ತದೆ.

Tags:
error: Content is protected !!