Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಇಂದು ಮಧ್ಯಾಹ್ನ ಕಲಾ ಗ್ರಾಮದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ನೆನ್ನೆ ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಇಂದು ಬೆಳಿಗ್ಗೆ 7.30ರಿಂದಲೇ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಮಧ್ಯಾಹ್ನ 12 ಗಂಟೆಯ ವೇಳೆಗೆ ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

ಜ್ಞಾನಭಾರತಿ ಸಮೀಪದ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Tags:
error: Content is protected !!