ಮೈಸೂರು: ದೆಹಲಿಯಲ್ಲಿ ಸಂಭವಿಸಿದ ಕಾರು ಬಾಂಬ್ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಭಯೋತ್ಪಾದನೆ ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಕಾರು ಬಾಂಬ್ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ ಮೋದಿ
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಘಟನೆಯಿಂದ ಬುರ್ಖಾ ಧರಿಸಿರುವ ಮಹಿಳೆಯರ ಮೇಲೆ ಅನುಮಾನ ಪಡುವಂತಾಗಿದೆ. ಹಿಂದೂಗಳು ಒಂದಾಗಿ ಮೂಲಭೂತವಾದಿಗಳ ವಿರುದ್ಧ ಹೋರಾಡುವಂತೆ ಕರೆ ನೀಡಿದರು.
ಹಿಂದೂ ಜಾಗರಣ ವೇದಿಕೆಯ ಸಂಚಾಲಕ ವಸಂತ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಮಂದಿ ಭಾಗಿಯಾಗಿದ್ದರು.





