ಕೇರಳ: ಶಬರಿಮಲೆ ಯಾತ್ರೆಗೆ ತೆರಳುವ ಭಕ್ತರಿಗೆ ಕೇರಳ ಸರ್ಕಾರ ಮಹತ್ವದ ಸೂಚನೆ ಕೊಟ್ಟಿದ್ದು, ಸ್ನಾನದ ವೇಳೆಯಲ್ಲಿ ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಹೇಳಿದೆ. ಕೇರಳದಲ್ಲಿ ಪತ್ತೆಯಾಗುತ್ತಿರುವ ಅಮೀಬಿಕ್ ಮೆನಿಂಗೋಎನ್ಸೆಫಾಲಿಟಿಸ್ ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರವು ಭಕ್ತರಿಗೆ ಮಹತ್ವದ ಸೂಚನೆ ನೀಡಿದೆ.
ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಜನರು ಔಷಧಗಳನ್ನು ತೆಗೆದುಕೊಂಡು ಬರಬೇಕು. ಒತ್ತಡ ನಿರ್ವಹಣೆಗಾಗಿ ನಡಿಗೆಯಂತಹ ಲಘು ವ್ಯಾಯಾಮ ಮಾಡಬೇಕು ಎಂದು ಸಲಹೆ ನೀಡಿದೆ.
ಎಲ್ಲರೂ ಕುದಿಸಿದ ನೀರನ್ನೇ ಕುಡಿಯಬೇಕು. ಬಯಲು ಬಹಿರ್ದೆಸೆ ನಿಷೇಧಿಸಲಾಗಿದ್ದು, ಶೌಚಾಲಯಗಳನ್ನೇ ಬಳಸಬೇಕು. ತ್ಯಾಜ್ಯಗಳನ್ನು ನಿರ್ದಿಷ್ಟ ಜಾಗದಲ್ಲೇ ಹಾಕಬೇಕು ಎಂದು ಸೂಚನೆ ನೀಡಲಾಗಿದೆ.
ಇನ್ನು ಯಾತ್ರೆಯ ವೇಳೆ ಪೂರೈಕೆಯಾಗುವ ಆಹಾರಗಳ ಗುಣಮಟ್ಟ ಪರೀಕ್ಷೆಗೆ ಆಹಾರ ಸುರಕ್ಷತಾ ಇಲಾಖೆ ವಿಶೇಷ ತಂಡಗಳನ್ನು ರಚನೆ ಮಾಡಿದೆ. ಇವರಿಗೆ ಆರೋಗ್ಯ ಇಲಾಖೆಯ ಕಾರ್ಡ್‌ಗಳನ್ನು ಸಹ ಕಡ್ಡಾಯಗೊಳಿಸಲಾಗಿದೆ.





