ಬೆಳಗಾವಿ: ಸಂಪುಟ ಪುನಾರಚನೆ ನಮ್ಮ ಕೈಯಲ್ಲಿ ಇಲ್ಲ. ಈ ಬಗ್ಗೆ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಗೊಂದಲದಲ್ಲಿದೆ. ಗೊಂದಲದ ಬಗ್ಗೆಯೂ ವರಿಷ್ಠರು ಗಮನಿಸುತ್ತಿದ್ದಾರೆ. ಈ ಬಗ್ಗೆ ಅವರೇ ಸ್ಪಷ್ಟಪಡಿಸಬೇಕು ಎಂದು ಹೇಳಿದರು.
ಇನ್ನು ದೆಹಲಿ ಪ್ರವಾಸದ ವೇಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಿದ್ದೇನೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹನುಮಣ್ಣವರ್ ಕೆಎಸ್‌ಆರ್‌ಟಿಸಿಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದೇನೆ ಅಷ್ಟೇ ಎಂದರು.
ಇನ್ನು ಬಿಹಾರ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವಿತ್ತು. ಆದರೆ ನಮ್ಮ ನಿರೀಕ್ಷೆ ಸುಳ್ಳಾಗಿದೆ. ಇವಿಎಂ ಬಗ್ಗೆ ಅನುಮಾನ ಇದ್ದೇ ಇದೆ. ಈ ಬಗ್ಗೆ ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಸ್ಪಷ್ಟಪಡಿಸಬೇಕು ಎಂದು ಹೇಳಿದರು.





