Mysore
28
scattered clouds

Social Media

ಭಾನುವಾರ, 25 ಜನವರಿ 2026
Light
Dark

ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮೂವರು ಮಾವೋವಾದಿಗಳು ಬಲಿ

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ.

ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಮೂವರು ಮಾವೋವಾದಿಗಳು ಬಲಿಯಾಗಿದ್ದಾರೆ.

ಈ ಬಗ್ಗೆ ಸುಕ್ಮಾ ಪೊಲೀಸ್‌ ವರಿಷ್ಠಾಧಿಕಾರಿ ಕಿರಣ್‌ ಚೌವ್ಹಾಣ್‌ ಮಾಹಿತಿ ನೀಡಿದ್ದು, ಮಾವೋವಾದಿಗಳು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದವು.

ದಟ್ಟಾರಣ್ಯದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳ ಗುಂಡೇಟಿಗೆ ಈವರೆಗೆ ಮೂವರು ಮಾವೋವಾದಿಗಳು ಬಲಿಯಾಗಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ.

Tags:
error: Content is protected !!