ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ರಕ್ಷಣೆಗೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆ ರಚನೆಯಾಗಲಿದೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಎಂಡಿಎ ಆಸ್ತಿ ಒತ್ತುವರಿ ಮಾಡಿರುವ ಹಾಗೂ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಭದ್ರತೆ ಒದಗಿಸುವುದರ ಜತೆಗೆ ಪ್ರಾಧಿಕಾರದ ಆಸ್ತಿ ಸಂರಕ್ಷಣೆಯನ್ನು ಈ ಪಡೆ ಮಾಡಲಿದೆ.
ಪ್ರಾಧಿಕಾರದ ಆಸ್ತಿ ರಕ್ಷಣೆಗೆ ಪ್ರತ್ಯೇಕ ಭದ್ರತಾ ಪಡೆ ಮಾಡಬೇಕೆಂಬ ಯೋಜನೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಈಗ ಪ್ರಾಧಿಕಾರದ ಆಯುಕ್ತರಾಗಿ ನೇಮಕಗೊಂಡಿರುವ ಕೆ.ಆರ್.ರಕ್ಷಿತ್ ಅವರು ಈ ಪಡೆ ರಚನೆಯ ಯೋಜನೆಗೆ ಮರು ಜೀವ ನೀಡಿದ್ದಾರೆ.
ಇದನ್ನು ಓದಿ: ರಾಜ್ಯದ ಅತಿದೊಡ್ಡ ಸೈಬರ್ ವಂಚನೆ ; ಮಹಿಳಾ ಟಿಕ್ಕಿಯ 31ಕೋಟಿ ದೋಖಾ..
ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಆಸ್ತಿಗೆ ಅತಿಕ್ರಮ ಪ್ರವೇಶ ಹಾಗೂ ಒತ್ತುವರಿ ಮಾಡಿಕೊಂಡು ಅನುಭೋಗದಲ್ಲಿರುವವರನ್ನು ತೆರವುಗೊಳಿಸಲು ಪೊಲೀಸ್ ಭದ್ರತೆ ಅಗತ್ಯವಿರುತ್ತದೆ. ಆದರೆ, ಸ್ಥಳೀಯ ಪೊಲೀಸರನ್ನು ಭದ್ರತೆಗೆ ಕೋರಿದಾಗ ತಮಗೆ ಬೇರೆ ಭದ್ರತಾ ಕರ್ತವ್ಯದ ಒತ್ತಡವಿದೆ ಎನ್ನುತ್ತಾರೆ. ಪ್ರಾಧಿಕಾರದ ಅಧಿಕಾರಿಗಳು ಕೋರಿದ ದಿನದಂದು ಭದ್ರತೆ ಒದಗಿಸಲು ಹಿಂದೇಟು ಹಾಕುತ್ತಾರೆ. ಅದರಿಂದಾಗಿ ಸರಿಯಾದ ಸಮಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಒತ್ತುವರಿ ತೆರವು ಕಾರ್ಯಾಚರಣೆಗೆ ತಡೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್ ಅವರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರೊಂದಿಗೆ ಚರ್ಚೆ ನಡೆಸಿ, ಒತ್ತುವರಿ ತೆರವು ಕಾರ್ಯಾಚರಣೆಯ ಭದ್ರತೆಗೆ ಪ್ರತ್ಯೇಕ ಪೊಲೀಸ್ ಭದ್ರತೆ ಪಡೆ ರಚಿಸುವ ಸಂಬಂಧ ಮನವಿ ಸಲ್ಲಿಸಿದ್ದಾರೆ.
ಒತ್ತುವರಿ ತೆರವು ಕಾರ್ಯಾಚರಣೆಗೆ ಭದ್ರತೆ ಒದಗಿಸಲೆಂದೇ ಪ್ರತ್ಯೇಕವಾದ ಪೊಲೀಸ್ ಭದ್ರತಾ ಪಡೆ ಹೊಂದುವುದು ಅತ್ಯಗತ್ಯವಾಗಿರುವುದರಿಂದ ಈ ಕುರಿತು ಸವಿಸ್ತಾರವಾದ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ,’’ ಎನ್ನುತ್ತಾರೆ ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್.
ಪೊಲೀಸ್ ಪಡೆ : ಈ ಪಡೆಯಲ್ಲಿ ಒಬ್ಬರು ಸಹಾಯಕ ಪೊಲೀಸ್ ಆಯುಕ್ತ, ಇಬ್ಬರು ಪೊಲೀಸ್ ಇನ್ಸ್ ಪೆಕ್ಟರ್‌ಗಳು, ಮೂವರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ನಾಲ್ವರು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಒಳಗೊಂಡಂತೆ 25 ಮಂದಿ ಪೊಲೀಸ್ ಸಿಬ್ಬಂದಿ ಇರು





