ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಹಗರುವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿನ ನೈಋತ್ಯ ಭಾಗದ ಶ್ರೀಲಂಕಾ ಕರಾವಳಿಯ ತೀರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ
ದಕ್ಷಿಣ ಒಳನಾಡು ಜಿಲ್ಲೆಗಳಾದ ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಕೆಲವೆಡೆ ನವೆಂಬರ್.22ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಚಳಿ ಶುರುವಾಯಿತು ಎನ್ನುವಷ್ಟರದಲ್ಲಿ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದ್ದು, ವಾತಾವರಣದಲ್ಲಿ ಬದಲಾವಣೆಯಾಗಲಿದೆ ಎನ್ನಲಾಗಿದೆ.





