Mysore
24
broken clouds

Social Media

ಭಾನುವಾರ, 25 ಜನವರಿ 2026
Light
Dark

ಮೈಸೂರು| ಸಿಎಂ ಸಿದ್ದರಾಮಯ್ಯ ಮನೆಗೆ ಅತಿಥಿ ಉಪನ್ಯಾಸಕರ ಪ್ರತಿಭಟನಾ ಜಾಥಾ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿರುವ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದ ಅತಿಥಿ ಉಪನ್ಯಾಸಕರನ್ನು ಪೊಲೀಸರು ತಡೆದರು.

ನೂರಾರು ಸಂಖ್ಯೆಯಲ್ಲಿ ಆಗಮಿಸಬೇಕಿದ್ದ ಅತಿಥಿ ಉಪನ್ಯಾಸಕರು, ಪೊಲೀಸರ ಬಂದೋಬಸ್ತ್‌ನಿಂದ ಸ್ಥಳಕ್ಕಾಗಮಿಸದೇ ಉಳಿದಿದ್ದಾರೆ.

ಪ್ರತಿಭಟನಾ ಜಾಥಾಗೆ ಪೊಲೀಸರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲ ಅತಿಥಿ ಉಪನ್ಯಾಸಕರು, ಪೊಲೀಸರು ಹಾಗೂ ಮೈಸೂರು ಜಿಲ್ಲಾಡಳಿತದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಾವು ಆಯ್ಕೆ ಮಾಡಿರುವ ಸಿಎಂರನ್ನು ನಾವೇ ಭೇಟಿಯಾಗಲು ಬಿಡುತ್ತಿಲ್ಲ. ವೋಟ್ ಕೇಳಲು ಬರುವಾಗ ಒಬ್ಬರೇ ಬರುತ್ತಾರೆ. ಆಗ ಯಾವುದೇ ಪ್ರೊಟೋಕಾಲ್ ಇರುವುದಿಲ್ಲ. ನಮ್ಮ ಸಮಸ್ಯೆ ಹೇಳಿಕೊಳ್ಳಲು ನೂರಾರು ಜನ ಬರುತ್ತಾರೆ, ಅವರಿಗಿಲ್ಲ ಅಡೆತಡೆ ನಮಗ್ಯಾಕೆ? ಸುಮಾರು 20 ವರ್ಷಗಳಿಂದಲೂ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ.
ದಿಢೀರನೇ ಇದೀಗ ಹೊಸ ನಿಯಮ ಜಾರಿಗೆ ಬಂದರೆ ಅತಿಥಿ ಉಪನ್ಯಾಸಕರ ಜೀವನಕ್ಕೆ ಮರಣ ಶಾಸನವಾಗುತ್ತದೆ. ಇದರಿಂದ 5 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುತ್ತಾರೆ. ಈ ಪೈಕಿ ನೊಂದವರ ಕುಟುಂಬ ಜೀವ ಕಳೆದುಕೊಂಡರೆ ಯಾರು ಹೊಣೆ? ಸಿಎಂ ಬಳಿ ನಮ್ಮ ಮನವಿ ಸಲ್ಲಿಸಲು ಪೊಲೀಸರು ಅವಕಾಶ ಕೊಡಿ.
ಇಲ್ಲವಾದಲ್ಲಿ ಮುಂದಿನ ದಿನ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!