Mysore
15
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಬೆಂಗಳೂರು | ಹಾಡಹಗಲೇ 7.11 ಕೋಟಿ ರೂ. ದರೋಡೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ಬುಧವಾರ ನಡೆದಿದೆ.

ಜಯದೇವ ಡೇರಿ ಸರ್ಕಲ್ ​ನಲ್ಲಿ ಈ ಘಟನೆ ನಡೆದಿದೆ. ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್ ಈ ಕೃತ್ಯವೆಸಗಿದ್ದಾರೆ.

ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್​​ನ ಬಳಿ ತಡೆದು ಹಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು.

ಇದನ್ನೂ ಓದಿ:-ಜಾನುವಾರಕ್ಕೆ ಮೇವು ಕತ್ತರಿಸುವಾಗ ವಿದ್ಯುತ್‌ ಸ್ಪರ್ಶ : ರೈತ ಸಾವು

ಈ ವೇಳೆ ಜಯದೇವ ಡೇರಿ ಸರ್ಕಲ್​ನಲ್ಲಿ ಇನ್ನೋವಾದಲ್ಲಿ ಬಂದ ದುಷ್ಕರ್ಮಿಗಳು ಎಟಿಎಂ ವಾಹನ ತಡೆದು ಗನ್ ​​ಮ್ಯಾನ್​​ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್​ಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!