Mysore
20
few clouds

Social Media

ಶನಿವಾರ, 24 ಜನವರಿ 2026
Light
Dark

ಭತ್ತ ಖರೀದಿ ಕೇಂದ್ರ ತೆರೆಯಲು ಒತ್ತಾಯ

ಮೈಸೂರು : ಜಿಲ್ಲೆಯಲ್ಲಿ ಭತ್ತ ಮತ್ತು ಜೋಳ ಖರೀದಿ ಕೇಂದ್ರವನ್ನು ತೆರೆಯಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಗರದ ನಜರ್‌ಬಾದ್‌ನಲ್ಲಿರುವ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ರೈತರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಭತ್ತ ಬೆಳೆದಿದ್ದಾರೆ. ಕೆ.ಆರ್.ನಗರ ತಾಲ್ಲೂಕು ಭತ್ತದ ಕಣಜ ಎಂದೇ ಹೆಸರಾಗಿದ್ದು, ಈಗಾಗಲೇ ಕಟಾವು ಆರಂಭವಾಗಿದೆ. ಆದರೆ, ಇನ್ನೂ ಖರೀದಿ ಕೇಂದ್ರ ಆರಂಭವಾಗಿಲ್ಲ. ಇದರಿಂದ ರೈತರು ದಲ್ಲಾಳಿಗಳಿಗೆ ಭತ್ತ ಮಾರಿ ನಷ್ಟ ಅನುಭವಿಸುವಂತಾಗಿದೆ. ಹೀಗಾಗಿ ಕೂಡಲೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಪಿ.ಮರಂಕಯ್ಯ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ತಾಲ್ಲೂಕು ಅಧ್ಯಕ್ಷ ಆನಂದೂರು ಪ್ರಭಾಕರ್, ಮಂಡಕಳ್ಳಿ ಮಹೇಶ್, ನಾಗನಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:-ರೇಷ್ಮೆ ಕೃಷಿಯಿಂದ ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯ : ವೈ.ಟಿ.ತಿಮ್ಮಯ್ಯ

ಪ್ರಮುಖ ಹಕ್ಕೊತ್ತಾಯಗಳು
* ಸರ್ಕಾರ ಎಲ್ಲಾ ತಾಲ್ಲೂಕುಗಳಲ್ಲಿ ಅಗತ್ಯವಿರುವ ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಭತ್ತವನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಬೇಕು
* ರಾಜ್ಯದ ಪಡಿತರ ವ್ಯವಸ್ಥೆಗೆ ಬೇಕಾದ ಅಕ್ಕಿ ಪೂರೈಕೆಗೆ ಅಗತ್ಯವಿರುವ ಭತ್ತವನ್ನು ರೈತರಿಂದಲೇ ನೇರವಾಗಿ ಖರೀದಿ ಮಾಡಬೇಕು
* ಈ ಹಿಂದೆ ರೈಸ್ ಮಿಲ್‌ಗಳಿಗೂ ಕನಿಷ್ಠ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ಅವಕಾಶವಿತ್ತು. ಅದನ್ನು ಮತ್ತೆ ಜಾರಿಗೆ ತರಬೇಕು
* ಜಿಲ್ಲೆಯಲ್ಲಿ ಮುಸುಕಿನ ಜೋಳ ಬೆಳೆದಿದ್ದು, ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ಕೂಡಲೇ ಜೋಳ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆಯಡಿ ಸರ್ಕಾರವೇ ಖರೀದಿಸಬೇಕು
* ಖರೀದಿ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

Tags:
error: Content is protected !!