Mysore
32
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಐದು ವರ್ಷವೂ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಐದು ವರ್ಷ ತಾವೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿರುವುದು ಬಹಳ ಸಂತೋಷ. ಅವರು ಸಿಎಂ ಆಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ. ಅವರಿಗೆ ಪಕ್ಷವು ಸಿಎಂ ಹುದ್ದೆಯ ಜವಾಬ್ದಾರಿಯನ್ನು ಕೊಟ್ಟಿದೆ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನು ಓದಿ: ಜೆಡಿಎಸ್‌ನಲ್ಲೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ : ಸಿಎಂ ಸಿದ್ದರಾಮಯ್ಯ

ಇನ್ನು ತಮ್ಮ ಪರವಾಗಿ ಸಚಿವರು, ಶಾಸಕರು, ಎಂಎಲ್‌ಸಿಗಳು ದೆಹಲಿ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ. ಇದರ ಬಗ್ಗೆ ಯಾರೂ ಕೂಡ ನನ್ನ ಬಳಿ ಚರ್ಚೆಯನ್ನೂ ಮಾಡಿಲ್ಲ. ಈ ವಿಚಾರ ನನಗೆ ಗೊತ್ತೇ ಇಲ್ಲ ಎಂದು ಹೇಳಿದರು.

Tags:
error: Content is protected !!