Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಚಳಿಯ ಪ್ರಮಾಣ ಹೆಚ್ಚಾಗಿದೆ. ಈ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಾಧಾರಣ ಮಳೆಯಾಗಿತ್ತು. ಇಂದು ಮುಂಜಾನೆಯಿಂದಲೇ ತುಂತುರು ಮಳೆ ಶುರುವಾಗಿದೆ. ಚಳಿ, ಶೀತ, ಗಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಇದನ್ನು ಓದಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏನದು ಗೊತ್ತಾ?

ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags:
error: Content is protected !!